ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ ಶಸ್ತ್ರ ಕೆಳಗಿಳಿಸಿದರೆ ಮಾತುಕತೆಗೆ ಸಿದ್ಧ: ರಷ್ಯಾ

Last Updated 25 ಫೆಬ್ರುವರಿ 2022, 12:38 IST
ಅಕ್ಷರ ಗಾತ್ರ

ಮಾಸ್ಕೋ: ಉಕ್ರೇನ್‌ ಸೇನೆ ಶಸ್ತ್ರ ಕೆಳಗಿಳಿಸಿದರೆ ಮಾತುಕತೆಗೆ ಸಿದ್ಧವಿರುವುದಾಗಿ ರಷ್ಯಾ ಶುಕ್ರವಾರ ಘೋಷಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ರಷ್ಯಾದ ವಿದೇಶಾಂಗ ಸಚಿವ ಲಾವ್‌ರೊವ್‌, ‘ಉದ್ವಿಗ್ನತೆ ಶಮನಗೊಳಿಸಲು ಮಾತುಕತೆಗೆ ಸಿದ್ಧ ಎಂದು ಹೇಳುತ್ತಿರುವ ಉಕ್ರೇನ್‌ ಅಧ್ಯಕ್ಷರ ಮಾತುಗಳೆಲ್ಲವೂ ಸುಳ್ಳು. ಉಕ್ರೇನ್‌ ಸೇನೆ ಶಸ್ತ್ರ ಕೆಳಗಿಳಿಸಿದರೆ ಮಾತುಕತೆಗೆ ರಷ್ಯಾ ಸಿದ್ಧವಿದೆ’ ಎಂದು ವಿದೇಶಾಂಗ ಸಚಿವ ಸೆರ್ಗೈಲಾವ್‌ರೊವ್ ತಿಳಿಸಿದರು.

ಉಕ್ರೇನ್‌ನಲ್ಲಿ ಸದ್ಯ ಇರುವ ಸರ್ಕಾರವನ್ನು ಪ್ರಜಾಸತ್ತಾತ್ಮಕ ಎಂದು ನಾವು ಒಪ್ಪಿಕೊಳ್ಳುವ ಸಾಧ್ಯತೆಗಳು ಇಲ್ಲ. ನಾವು ಉಕ್ರೇನ್ ಅನ್ನು ಆಕ್ರಮಿಸಿಕೊಳ್ಳಲು ಪ್ರಯತ್ನಿಸುತ್ತಿಲ್ಲ. ಉಕ್ರೇನ್‌ ಅನ್ನು ದಬ್ಬಾಳಿಕೆಯಿಂದ ಮುಕ್ತಗೊಳಿಸಲು ಬಯಸುತ್ತೇವೆ. ಉಕ್ರೇನ್‌ನ ನಾಗರಿಕರನ್ನು ಸ್ವತಂತ್ರಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದೂ ಅವರು ಹೇಳಿದ್ದಾರೆ.

ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ಕ್ಷಿಪಣಿ ದಾಳಿ ನಡೆಸಿಲ್ಲ ಎಂದು ರಷ್ಯಾ ಇದೇ ವೇಳೆ ಸ್ಪಷ್ಟಪಡಿಸಿದೆ. ಕೀವ್‌ನಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ರಷ್ಯಾ ದಾಳಿ ನಡೆಸುತ್ತಿದೆ ಎಂದು ಉಕ್ರೇನ್‌ ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT