ಸೋಮವಾರ, ನವೆಂಬರ್ 29, 2021
21 °C

ರಷ್ಯಾದಲ್ಲಿ ಕೋವಿಡ್‌ ಅಬ್ಬರ: ಈ ವರೆಗಿನ ಅತ್ಯಧಿಕ ಸಂಖ್ಯೆಯ ಪ್ರಕರಣಗಳು ಪತ್ತೆ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಮಾಸ್ಕೋ: ಕಳೆದ 24 ಗಂಟೆಗಳಲ್ಲಿ ರಷ್ಯಾದಲ್ಲಿ 41,335 ಹೊಸ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಕೋವಿಡ್‌ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಇದು ದಿನವೊಂದರಲ್ಲಿ ವರದಿಯಾದ ಅತ್ಯಧಿಕ ಪ್ರಮಾಣದ ಪ್ರಕರಣಗಳಾಗಿವೆ.

ಸರ್ಕಾರದ ‘ಕೊರೊನಾ ವೈರಸ್ ಕಾರ್ಯಪಡೆ’ಯು ಕೋವಿಡ್‌ಗೆ ಸಂಬಂಧಿಸಿದ 1,188 ಸಾವುಗಳನ್ನು ಖಚಿತಪಡಿಸಿದೆ.

ವೈರಸ್ ಹರಡುವುದನ್ನು ತಡೆಯಲು ರಷ್ಯಾದಲ್ಲಿ ಕಚೇರಿ–ಕಾರ್ಖಾನೆಗಳನ್ನು ಒಂದು ವಾರಗಳ ವರೆಗೆ ಮುಚ್ಚಲಾಗಿದೆ. ಕೆಲವು ಪ್ರದೇಶಗಳಲ್ಲಿ ಮುಂದಿನ ವಾರವೂ ನಿರ್ಬಂಧಗಳನ್ನು ವಿಸ್ತರಿಸುವ ಸಾಧ್ಯತೆ ಇದೆ. ಇದರ ಮಧ್ಯೆಯೂ ಅನೇಕರು ಸೋಮವಾರದಿಂದ ಕೆಲಸ ಪುನರಾರಂಭಿಸಲು ನಿರ್ಧರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು