ಮಾಸ್ಕೊ: ಅಮೆರಿಕ ಮತ್ತು ನ್ಯಾಟೊ ಪಡೆಗಳು ತಮ್ಮ ಸೈನ್ಯವನ್ನು ಆತುರವಾಗಿ ಹಿಂತೆಗೆದುಕೊಂಡಿರುವುದು ಅಫ್ಗಾನಿಸ್ತಾನದಲ್ಲಿ ಭದ್ರತೆಗೆ ಧಕ್ಕೆಯುಂಟಾಗಲು ಕಾರಣವಾಗಿದೆ ಎಂದು ರಷ್ಯಾ ಶುಕ್ರವಾರ ಆರೋಪಿಸಿದೆ.
ಭದ್ರತೆಯು ಕ್ಷೀಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರಗಳಲ್ಲೂ ಇಂಥ ಅಸ್ಥಿರತೆ ಉಂಟಾಗುವ ಸಾಧ್ಯತೆ ಇದೆಯೆಂದೂ ರಷ್ಯಾ ಎಚ್ಚರಿಸಿದೆ.
‘ದುರುದೃಷ್ಟವಶಾತ್ ಇತ್ತೀಚಿನ ದಿನಗಳಲ್ಲಿ ನಾವು ಅಫ್ಗಾನಿಸ್ತಾನದ ದುಃಸ್ಥಿತಿಯನ್ನು ನೋಡಬೇಕಾಗಿದೆ’ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್‌ರೊವ್ ಅವರು ಸುದ್ದಿಸಂಸ್ಥೆಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಅಮೆರಿಕ ಮತ್ತು ನ್ಯಾಟೊ ಪಡೆಗಳು ತಮ್ಮ ಸೈನ್ಯವನ್ನು ಹಿಂತೆಗೆದುಕೊಂಡ ಬೆನ್ನಲ್ಲೇ ತಾಲಿಬಾನಿಗಳು ಅಫ್ಗಾನಿಸ್ತಾನದ ಗಡಿಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.