ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕೋರ್ಟ್‌: ರಷ್ಯಾ-ಉಕ್ರೇನ್‌ ಯುದ್ಧಾಪರಾಧ ಪ್ರಕರಣಗಳ ತನಿಖೆ

Last Updated 3 ಮಾರ್ಚ್ 2022, 4:47 IST
ಅಕ್ಷರ ಗಾತ್ರ

ಹೇಗ್‌, ನೆದರ್ಲೆಂಡ್‌: ಉಕ್ರೇನ್‌ನಲ್ಲಿ ಯುದ್ಧಾಪರಾಧಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿ ತಕ್ಷಣ ತನಿಖೆ ಆರಂಭಿಸುವುದಾಗಿ ಅಂತರರಾಷ್ಟ್ರೀಯ ಕ್ರಿಮಿನಲ್‌‌ ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಕರೀಂ ಖಾನ್‌ ತಿಳಿಸಿದ್ದಾರೆ.

ಯೂರೋಪ್‌ ಒಕ್ಕೂಟ ರಾಷ್ಟ್ರಗಳು ಸೇರಿದಂತೆ ಆಸ್ಟ್ರೇಲಿಯಾ, ಬ್ರಿಟನ್‌, ಕೆನಡಾ, ನ್ಯೂಜಿಲೆಂಡ್‌, ಸ್ವಿಟ್ಜರ್ಲೆಂಡ್‌ ಮತ್ತು ಹಲವು ಲ್ಯಾಟಿನ್‌ ಅಮೆರಿಕ ರಾಷ್ಟ್ರಗಳು ಸೇರಿ ಒಟ್ಟು 39 ರಾಷ್ಟ್ರಗಳ ಬೆಂಬಲವನ್ನು ಕರೀಂ ಖಾನ್‌ ಕಚೇರಿ ಸ್ವೀಕರಿಸಿದೆ.

'ಯುದ್ಧ ಪೀಡಿತ ಉಕ್ರೇನ್‌ನಲ್ಲಿನ ಪರಿಸ್ಥಿತಿಯ ಕುರಿತಾಗಿ ತನಿಖೆ ಆರಂಭಿಸುವ ಬಗ್ಗೆ ಐಸಿಸಿಗೆ ಅಧಿಸೂಚನೆ ನೀಡಿದ್ದೇನೆ. ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದೇವೆ' ಎಂದು ಮಾನವ ಹಕ್ಕುಗಳ ಹೋರಾಟಗಾರರು ಆಗಿರುವ ಕರೀಂ ಖಾನ್ ತಿಳಿಸಿದ್ದಾರೆ ಎಂದು 'ಎನ್‌ಡಿಟಿವಿ' ವರದಿ ಮಾಡಿದೆ.

ರಷ್ಯಾ ಆಕ್ರಮಣದ ನಂತರ ಉಕ್ರೇನ್‌ನಲ್ಲಿನ ನರಮೇಧ, ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಬಗ್ಗೆ ತನಿಖೆ ಆರಂಭಿಸುವುದಾಗಿ ಸೋಮವಾರ ಕರೀಂ ಖಾನ್‌ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT