ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ಗೆ ಭಾರತ ಬೆಂಬಲ ನೀಡಲಿ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

Last Updated 24 ಫೆಬ್ರುವರಿ 2022, 12:47 IST
ಅಕ್ಷರ ಗಾತ್ರ

ನವದೆಹಲಿ: ಪ್ರಜಾತಾಂತ್ರಿಕ ರಾಷ್ಟ್ರವಾಗಿ ಭಾರತವು ಉಕ್ರೇನ್‌ ಅನ್ನು ಬೆಂಬಲಿಸಬೇಕೆಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ‘ಚೀನಾ ಮತ್ತು ಪಾಕಿಸ್ತಾನದೊಂದಿಗೆ ರಷ್ಯಾ ಒಪ್ಪಂದ ಮಾಡಿಕೊಂಡಿದೆ. ಆ ಹಿನ್ನೆಲೆಯಲ್ಲಿ ಭಾರತವು ರಷ್ಯಾದೊಂದಿಗೆ ಇರಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

‘ನಾವು ಉಕ್ರೇನ್‌ನೊಂದಿಗೆ ಬಾಂಧವ್ಯವನ್ನು ಹೊಂದಬೇಕು ಮತ್ತು ನ್ಯಾಟೊದೊಂದಿಗೆ ಇರಬೇಕು. ಪ್ರಜಾತಾಂತ್ರಿಕ ದೇಶವಾಗಿ ಇದು ನಮಗೆ ರಾಷ್ಟ್ರೀಯ ಹಿತಾಸಕ್ತಿಯ ವಿಚಾರ’ ಎಂದು ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ. ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಉಕ್ರೇನ್ ಸೈನಿಕರಿಗೆ ಅವರು ಕರೆ ನೀಡಿದ್ದಾರೆ.

ರಷ್ಯಾ ಕ್ರಮವನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಖಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT