ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದ ನಡೆಗಳು ಯುದ್ಧಾಪರಾಧಗಳೆಂದು ಪರಿಗಣಿಸಲ್ಪಟ್ಟಿವೆ: ಬ್ರಿಟನ್‌ ಪ್ರಧಾನಿ

Last Updated 2 ಮಾರ್ಚ್ 2022, 13:49 IST
ಅಕ್ಷರ ಗಾತ್ರ

ಲಂಡನ್‌: ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಅಮಾನವೀಯ ದಾಳಿಗಳನ್ನು ‘ಯುದ್ಧಾಪರಾಧಗಳು’ ಎಂದು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಬ್ರಿಟನ್‌ ಸಂಸತ್‌ನಲ್ಲಿ ಮಾತನಾಡಿರುವ ಅವರು, ‘ಉಕ್ರೇನ್‌ಗೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೆಗೆದುಕೊಂಡ ಕ್ರಮಗಳು ಯುದ್ಧಾಪರಾಧಗಳ ಎಲ್ಲ ಲಕ್ಷಣಗಳನ್ನೂ ಹೊಂದಿವೆ’ ಎಂದು ಹೇಳಿದ್ದಾರೆ.

‘ಮುಗ್ಧ ನಾಗರಿಕರ ಮೇಲೆ ಪುಟಿನ್ ಅವರ ಸೇನೆಯು ಶಸ್ತಾಸ್ತ್ರಗಳಿಂದ ದಾಳಿ ನಡೆಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಈ ಕ್ರಿಯೆಗಳು ನನ್ನ ದೃಷ್ಟಿಯಲ್ಲಿ ಯುದ್ಧಾಪರಾಧಗಳೆಂದು ಪರಿಗಣಿಸಲ್ಪಟ್ಟಿವೆ’ ಎಂದು ಜಾನ್ಸನ್ ಸಂಸತ್ತಿಗೆ ತಿಳಿಸಿದರು.

ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಳೆದ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ.

ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಅಮಾನವೀಯ ದಾಳಿಗಳಲ್ಲಿ ಮಕ್ಕಳು ಸೇರಿದಂತೆ ನಾಗರಿಕರು ಬಲಿಯಾಗಿದ್ದಾರೆ. ಪುಟಿನ್‌ ನಡೆಯ ವಿರುದ್ಧ ವಿಶ್ವದಾದ್ಯಂತ ವ್ಯಾಪಕ ಪ‍್ರತಿಭಟನೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT