ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ಗೆ ಆರ್ಥಿಕ ನೆರವು ನೀಡಲು ವಿಶ್ವ ಬ್ಯಾಂಕ್ ಸಿದ್ಧ: ಡೇವಿಡ್‌ ಮಾಲ್‌ಪಾಸ್‌

Last Updated 25 ಫೆಬ್ರುವರಿ 2022, 2:23 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಕೈಗೊಂಡ ಕ್ರಮದ ಬಗ್ಗೆ ವಿಶ್ವ ಬ್ಯಾಂಕ್ ಕಳವಳ ವ್ಯಕ್ತಪಡಿಸಿದ್ದು, ಪ್ರಸ್ತುತ ರಾಜಕೀಯ ಮತ್ತು ಮಿಲಿಟರಿ ಬಿಕ್ಕಟ್ಟು ಎದುರಿಸುತ್ತಿರುವ ಉಕ್ರೇನ್‌ಗೆ ತಕ್ಷಣದ ಹಣಕಾಸಿನ ನೆರವು ನೀಡಲು ಸಿದ್ಧ ಎಂದು ತಿಳಿಸಿದೆ.

‘ಉಕ್ರೇನ್‌ಗೆ ತಕ್ಷಣದ ಹಣಕಾಸಿನ ಬೆಂಬಲವನ್ನು ಒದಗಿಸಲು ನಾವು ಸಿದ್ಧರಿದ್ದೇವೆ. ಅಭಿವೃದ್ಧಿ ಪಾಲುದಾರ ರಾಷ್ಟ್ರಗಳಿಗೆ ವಿಶ್ವ ಬ್ಯಾಂಕ್ ಸಮೂಹವು ತ್ವರಿತ ಪ್ರತಿಕ್ರಿಯೆಗಾಗಿ ಹಣಕಾಸು ಮತ್ತು ತಾಂತ್ರಿಕ ಬೆಂಬಲ ನೀಡಲು ಬದ್ಧವಾಗಿದೆ’ ಎಂದು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಡೇವಿಡ್‌ ಮಾಲ್‌ಪಾಸ್‌ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಜೀವಹಾನಿಯಿಂದ ಬೇಸರವಾಗಿದೆ. ವಿಶ್ವದ ಇತರೆ ರಾಷ್ಟ್ರಗಳು ಉಕ್ರೇನ್‌ಗೆ ಬೆಂಬಲ ನೀಡಬೇಕಾದ ನಿರ್ಣಾಯಕ ಸಮಯ ಇದಾಗಿದೆ ಎಂದು ಮಾಲ್‌ಪಾಸ್‌ ತಿಳಿಸಿದ್ದಾರೆ.

ಡೇವಿಡ್‌ ಮಾಲ್‌ಪಾಸ್‌ ಅವರು ಈಗಾಗಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಆರ್ಥಿಕ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಉಕ್ರೇನ್‌ನಲ್ಲಿನ ವಿನಾಶಕಾರಿ ಬೆಳವಣಿಗೆಯಿಂದಾಗಿ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳು ಬೀರುತ್ತವೆ. ಆ ನಿಟ್ಟಿನಲ್ಲಿ ಆಗಬಹುದಾದ ವೆಚ್ಚಗಳ ಕುರಿತು ಪರಾಮರ್ಶೆ ನಡೆಸಲು ಅಂತರರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ (ಐಎಂಎಫ್‌) ನಿಕಟ ಸಂಪರ್ಕ ಹೊಂದಿರುವುದಾಗಿ ವಿಶ್ವ ಬ್ಯಾಂಕ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT