ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆರ್ನೋಬಿಲ್ ಅಣು ಸ್ಥಾವರ: ವಿದ್ಯುತ್‌ ಮಾರ್ಗಗಳ ದುರಸ್ತಿ ಶುರು – ಉಕ್ರೇನ್ ಮಾಹಿತಿ

ಅಂತರರಾಷ್ಟ್ರೀಯ ಅಣುಶಕ್ತಿ ಸಂಸ್ಥೆಗೆ ಉಕ್ರೇನ್ ಮಾಹಿತಿ
Last Updated 12 ಮಾರ್ಚ್ 2022, 13:27 IST
ಅಕ್ಷರ ಗಾತ್ರ

ಬರ್ಲಿನ್: ಚೆರ್ನೊಬಿಲ್ ಅಣು ವಿದ್ಯುತ್ ಸ್ಥಾವರದಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂಬುದಾಗಿ ಉಕ್ರೇನ್‌ ಮಾಹಿತಿ ನೀಡಿದೆ ಎಂದು ಅಂತರರಾಷ್ಟ್ರೀಯ ಅಣುಶಕ್ತಿ ಸಂಸ್ಥೆ (ಐಎಇಎ) ಹೇಳಿದೆ.

ಕಳೆದ ವಾರ ರಷ್ಯಾ ಪಡೆಗಳು ನಡೆಸಿದ ದಾಳಿಯಲ್ಲಿ ಚೆರ್ನೋಬಿಲ್ ಅಣು ವಿದ್ಯುತ್ ಸ್ಥಾವರ ಹಾನಿಗೊಳಗಾಗಿತ್ತಲ್ಲದೇ, ಆತಂಕಕ್ಕೆ ಕಾರಣವಾಗಿತ್ತು.

ದಾಳಿ ನಂತರ ಅಣು ವಿದ್ಯುತ್ ಸ್ಥಾವರದ ಸ್ಥಿತಿ ಕ್ಲಿಷ್ಟವಾಗಿದೆ. ಆದಾಗ್ಯೂ, ದುರಸ್ತಿ ಕಾರ್ಯವನ್ನು ತಂತ್ರಜ್ಞರು ಕೈಗೊಂಡಿದ್ದಾರೆ. ಘಟಕದ ಬಳಿಯ ಒಂದು ವಿಭಾಗವನ್ನು ದುರಸ್ತಿಗೊಳಿಸಲಾಗಿದೆ. ಆದರೆ ಇನ್ನಷ್ಟು ಸ್ಥಳಗಳಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಬೇಕಿದೆ ಎಂದು ಐಎಇಎ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT