ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದ ಪರಮಾಣು ಪಡೆಗಳಿಗೆ ‘ಹೈ ಅಲರ್ಟ್‌’ ಆದೇಶ ನೀಡಿದ ಪುಟಿನ್‌

Last Updated 27 ಫೆಬ್ರುವರಿ 2022, 16:05 IST
ಅಕ್ಷರ ಗಾತ್ರ

ಮಾಸ್ಕೋ: ರಷ್ಯಾದ ಪರಮಾಣು ಪಡೆಗಳಿಗೆ ‘ಹೈ ಅಲರ್ಟ್‌’ ಆಗಿರುವಂತೆ ಪುಟಿನ್‌ ಆದೇಶಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್‌’ ವರದಿ ಮಾಡಿದೆ.

ರಷ್ಯಾ ಸೈನ್ಯದ ದಾಳಿಯನ್ನು ಉಕ್ರೇನ್‌ನ ಹಾರ್ಕಿವ್‌ ನಗರದಲ್ಲಿ ಹಿಮ್ಮೆಟ್ಟಿಸಲಾಗಿದೆ. ರಾಜಧಾನಿ ಕೀವ್‌ ಉಕ್ರೇನ್‌ ಸರ್ಕಾರದ ಹಿಡಿತದಲ್ಲಿಯೇ ಇದೆ. ರಷ್ಯಾದ ಭೀಕರ ದಾಳಿಯ ನಡುವೆಯೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ತಮ್ಮ ಜನರನ್ನು ಒಂದುಗೂಡಿಸಲು ಯಶಸ್ವಿಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ರಷ್ಯಾದ ಪರಮಾಣು ಪಡೆಗಳನ್ನು ಹೈ ಅಲರ್ಟ್‌ನಲ್ಲಿ ಇಡಲು ಮಿಲಿಟರಿ ಅಧಿಕಾರಿಗಳಿಗೆ ಪುಟಿನ್‌ ಆದೇಶಿಸಿದ್ದಾರೆ.

ನ್ಯಾಟೊ ನಾಯಕರ ರಷ್ಯಾ ವಿರೋಧಿ ಹೇಳಿಕೆಗಳು ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳಿಂದ ವಿಧಿಸಲಾಗಿರುವ ಆರ್ಥಿಕ ನಿರ್ಬಂಧಗಳು ಪುಟಿನ್‌ ಅವರನ್ನು ವಿಚಲಿತರನ್ನಾಗಿ ಮಾಡಿವೆ ಎಂಬ ಮಾತುಗಳೂ ಕೇಳಿಬಂದಿವೆ.

ಪುಟಿನ್‌ ಆದೇಶದ ಬಳಿಕವೇಬೆಲರೂಸ್‌ ಗಡಿಯಲ್ಲಿ ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್ ಒಪ್ಪಿಕೊಂಡಿದೆ ಎಂದು ರಷ್ಯಾದ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT