ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ದಾಳಿಯಿಂದ ಉಕ್ರೇನ್‌ನಲ್ಲಿ ಲಕ್ಷಾಂತರ ಜನರಿಗೆ ಸಂಕಷ್ಟ: ವಿಶ್ವಸಂಸ್ಥೆ

Last Updated 25 ನವೆಂಬರ್ 2022, 11:10 IST
ಅಕ್ಷರ ಗಾತ್ರ

ಜಿನೆವಾ: ಉಕ್ರೇನ್‌ನಲ್ಲಿ ಮೂಲಸೌಕರ್ಯ ವ್ಯವಸ್ಥೆಯ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಅಕ್ಟೋಬರ್‌ನಿಂದ ಈಚೆಗೆ 77 ನಾಗರಿಕರು ಮೃತಪಟ್ಟಿದ್ದಾರೆ. ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನ್ ವೋಲ್ಕರ್‌ ಟರ್ಕ್‌ ಗುರುವಾರ ಹೇಳಿದ್ದಾರೆ.

'ಲಕ್ಷಾಂತರ ಜನರು ತೀವ್ರ ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ. ದಾಳಿಯಿಂದಾಗಿ ಜೀವ ಭಯದಸನ್ನಿವೇಶ ಸೃಷ್ಟಿಯಾಗಿದೆ. ಒಟ್ಟಾರೆಯಾಗಿ ಗಮನಿಸಿದರೆ, ಇದು (ರಷ್ಯಾ ದಾಳಿಯು) ಅಂತರರಾಷ್ಟ್ರೀಯ ಮಾನವೀಯ ಕಾನೂನು ಅಡಿಯಲ್ಲಿ ಗಂಭೀರ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ'ಎಂದು ವೋಲ್ಕರ್ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ಪ್ರಾಥಮಿಕ ವಿಶ್ಲೇಷಣೆ ಪ್ರಕಾರ, ವಿಡಿಯೊಗಳಲ್ಲಿ ಕಂಡು ಬಂದಿರುವಂತೆ ಉಕ್ರೇನ್‌ ಸೈನಿಕರು ರಷ್ಯಾದ ಯುದ್ಧ ಕೈದಿಗಳನ್ನು ಗಲ್ಲಿಗೇರಿಸುತ್ತಿರುವ ದೃಶ್ಯಗಳು 'ಅಧಿಕೃತವಾಗಿರುವ ಸಾಧ್ಯತೆ ಹೆಚ್ಚಾಗಿದೆ' ಎಂದೂಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT