ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ಆಕ್ರಮಣ: ಉಕ್ರೇನ್‌ಗೆ ರಕ್ಷಣಾ ನೆರವು ನೀಡಲಿರುವ ಗ್ರೀಸ್‌

Last Updated 28 ಫೆಬ್ರುವರಿ 2022, 12:44 IST
ಅಕ್ಷರ ಗಾತ್ರ

ಅಥೆನ್ಸ್: ಯುದ್ದ ಪೀಡಿತ ಉಕ್ರೇನ್‌ಗೆ ರಕ್ಷಣಾ ನೆರವು ನೀಡಲು ಗ್ರೀಸ್‌ ಮುಂದಾಗಿದೆ ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್‌’ ವರದಿ ಮಾಡಿದೆ.

ರಕ್ಷಣಾ ಸಾಮಗ್ರಿಗಳನ್ನು ಕಳುಹಿಸಿಕೊಡಲು ಉಕ್ರೇನ್‌ ಸರ್ಕಾರವು ಮನವಿ ಮಾಡಿತ್ತು. ಆ ಹಿನ್ನೆಲೆಯಲ್ಲಿ ಉಕ್ರೇನ್‌ಗೆ ರಕ್ಷಣಾ ಸಾಮಗ್ರಿ ನೆರವನ್ನು ನೀಡಲಾಗುತ್ತಿದೆ ಎಂದು ಗೀಸ್‌ ಪ್ರಧಾನಿ ಕಚೇರಿ ತಿಳಿಸಿದೆ.

ಎರಡು C-130 ಮಿಲಿಟರಿ ವಿಮಾನಗಳು ಸೇರಿದಂತೆ ಹಲವು ಯುದ್ದ ಸಾಮಾಗ್ರಿಗಳನ್ನು ಪೋಲೆಂಡ್‌ ಮೂಲಕ ಉಕ್ರೇನ್‌ಗೆ ಸಾಗಿಸಲಾಗುತ್ತದೆ.

ಉಕ್ರೇನ್‌ಗೆ ಬೆಂಬಲ ಸೂಚಿಸಲು ರಷ್ಯಾ ಮೂಲದ ಹೂಡಿಕೆದಾರರಿಗೆ ಗ್ರೀಸ್‌ ದೇಶವು ನಿರ್ಬಂಧ ಹೇರಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT