ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ವಿಮಾನಗಳಿಗೆ ವಾಯುಮಾರ್ಗ ಮುಚ್ಚಲು ಜರ್ಮನಿಯಿಂದಲೂ ನಿರ್ಧಾರ

Last Updated 27 ಫೆಬ್ರುವರಿ 2022, 12:33 IST
ಅಕ್ಷರ ಗಾತ್ರ

ಬರ್ಲಿನ್: ರಷ್ಯಾದ ವಿಮಾನಗಳಿಗೆ ಮೂರು ತಿಂಗಳ ಕಾಲ ತನ್ನ ವಾಯು ಮಾರ್ಗವನ್ನು ಮುಚ್ಚುವುದಾಗಿ ಯುರೋಪಿನ ಪ್ರಮುಖ ರಾಷ್ಟ್ರ ಜರ್ಮನಿ ತಿಳಿಸಿದೆ.

ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಜರ್ಮನಿ ಸರ್ಕಾರ ಹೇಳಿದೆ.

ಇಂಗ್ಲೆಂಡ್‌, ಜೆಕ್ ಗಣರಾಜ್ಯ, ಪೋಲೆಂಡ್ ಮತ್ತು ಬಲ್ಗೇರಿಯಾ ರಾಷ್ಟ್ರಗಳೂ ರಷ್ಯಾದ ವಿಮಾನಗಳಿಗೆ ತಮ್ಮ ವಾಯುಪ್ರದೇಶವನ್ನು ಮುಚ್ಚಿರುವುದಾಗಿ ಈಗಾಗಲೇ ಘೋಷಿಸಿವೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ಇದೀಗ ಉಕ್ರೇನ್ ರಾಜಧಾನಿ ಕೀವ್‌, ಖಾರ್ಕಿವ್‌ ನಗರವನ್ನು ವಶಪಡಿಸಿಕೊಳ್ಳಲು ರಷ್ಯಾ ಪಡೆಗಳು ಮುಂದಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT