ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ಆಕ್ರಮಣ: ರೊಮೇನಿಯಾ ಪ್ರವೇಶಿಸಿದ 43,000ಕ್ಕೂ ಹೆಚ್ಚು ಉಕ್ರೇನ್ ಪ್ರಜೆಗಳು

Last Updated 27 ಫೆಬ್ರುವರಿ 2022, 9:43 IST
ಅಕ್ಷರ ಗಾತ್ರ

ಬುಕಾರೆಸ್ಟ್‌: ರಷ್ಯಾದ ಆಕ್ರಮಣ ಆರಂಭವಾದ ನಂತರ 43,000 ಕ್ಕೂ ಹೆಚ್ಚು ಉಕ್ರೇನಿಯನ್ನರು ರೊಮೇನಿಯಾವನ್ನು ಪ್ರವೇಶಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್‌’ ವರದಿ ಮಾಡಿದೆ.

ಮೂರು ದಿನಗಳ ಹಿಂದೆ ರಷ್ಯಾವು ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಆರಂಭಿಸಿದ ಬಳಿಕ 43,000 ಕ್ಕೂ ಹೆಚ್ಚು ಉಕ್ರೇನಿಯನ್ನರು ರೊಮೇನಿಯಾಕ್ಕೆ ಪಲಾಯನ ಮಾಡಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ಇದೀಗ ಉಕ್ರೇನ್ ರಾಜಧಾನಿ ಕೀವ್‌, ಖಾರ್ಕಿವ್‌ ನಗರವನ್ನು ವಶಪಡಿಸಿಕೊಳ್ಳಲು ರಷ್ಯಾ ಪಡೆಗಳು ಮುಂದಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT