ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ದೇಶ ಈಡೇರುವವರೆಗೆ ಉಕ್ರೇನ್‌ನಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ: ಪುಟಿನ್

Last Updated 12 ಏಪ್ರಿಲ್ 2022, 16:17 IST
ಅಕ್ಷರ ಗಾತ್ರ

ಮಾಸ್ಕೊ: ತನ್ನ ಗುರಿಗಳನ್ನು ಈಡೇರಿಸಿಕೊಳ್ಳುವವರೆಗೆ ಉಕ್ರೇನ್‌ನಲ್ಲಿ ರಷ್ಯಾ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಲಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಯೋಜನೆಯ ಪ್ರಕಾರವೇ ಈಗ ಕಾರ್ಯಾಚರಣೆ ನಡೆಯುತ್ತಿದೆ. ಜೀವ ಹಾನಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಷ್ಯಾ ವೇಗವಾಗಿ ಕಾರ್ಯಾಚರಣೆ ಕೈಗೊಂಡಿಲ್ಲ ಎಂದು ಅವರು ಹೇಳಿದರು.

ರಷ್ಯಾದ ಪೂರ್ವ ಭಾಗದಲ್ಲಿರುವ ‘ವೊಸ್ಟೊಚ್ನಿ’ ಬಾಹ್ಯಾಕಾಶ ಉಡ್ಡಯನ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, 'ನಿಗದಿತ ಗುರಿಗಳನ್ನು ತಲುಪುವವರೆಗೆ ಮಿಲಿಟರಿ ಕಾರ್ಯಾಚರಣೆಯು ಮುಂದುವರಿಯುತ್ತದೆ' ಎಂದು ಹೇಳಿದರು.

ಇಸ್ತಾನ್‌ಬುಲ್‌ನಲ್ಲಿ ರಷ್ಯಾದ ಸಂಧಾನಕಾರರೊಂದಿಗಿನ ಮಾತುಕತೆಯ ಸಮಯದಲ್ಲಿ ಮಾಡಿದ ಪ್ರಸ್ತಾಪಗಳಿಂದ ಉಕ್ರೇನ್ ಹಿಂದೆ ಸರಿದಿದೆ. ಇದರ ಪರಿಣಾಮವಾಗಿಯೇ ಮಾತುಕತೆಯಲ್ಲಿ ಬಿಕ್ಕಟ್ಟು ಉಂಟಾಗಿದೆ ಮತ್ತು ಮಾಸ್ಕೋ ತನ್ನ ಆಕ್ರಮಣವನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲದಂತಾಗಿದೆ ಎಂದು ಪುಟಿನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT