ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ–20 ಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ ರಷ್ಯಾ ವಿದೇಶಾಂಗ ಸಚಿವ

Last Updated 1 ಮಾರ್ಚ್ 2023, 3:12 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ನಾಳೆಯಿಂದ (ಮಾರ್ಚ್‌ 2) ನಡೆಯಲಿರುವ ಜಿ–20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸರ್ಗೈ ಲಾವ್ರೊವ್ ಭಾಗವಹಿಸಲಿದ್ದಾರೆ.

ಜಿ–20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ಅವರು ಮಂಗಳವಾರ ತಡ ರಾತ್ರಿ ಭಾರತಕ್ಕೆ ಆಗಮಿಸಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

ಗುರುವಾರ ಹಾಗೂ ಶುಕ್ರವಾರ ಜಿ–20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಚೀನಾದ ಸಚಿವ ಕಿನ್ ಗಾಂಗ್‌ ‍ಪಾಲ್ಗೊಳ್ಳುವರು ಎಂದು ಚೀನಾ ಹೇಳಿದೆ.

ಸಚಿವ ಸರ್ಗೈ ಲಾವ್ರೊವ್ ಅವರು ಇಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಇಲಾಖೆಯ ಮೂಲಗಳು ತಿಳಿಸಿವೆ.

ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಆಹಾರ ಮತ್ತು ಇಂಧನ ಕ್ಷೇತ್ರಗಳಲ್ಲಿ ಭದ್ರತೆ ಹಾಗೂ ಅಭಿವೃದ್ಧಿಯಲ್ಲಿ ಸಹಕಾರ ಸೇರಿದಂತೆ ಉಕ್ರೇನ್‌ ಬಿಕ್ಕಟ್ಟಿನ ಕುರಿತು ಈ ಸಲದ ಜಿ–20 ವೇದಿಕೆಯಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.

ಅಂತರರಾಷ್ಟ್ರೀಯ ಸಹಕಾರಕ್ಕಾಗಿ ಜಿ–20 ವೇದಿಕೆಯನ್ನು ರಚಿಸಲಾಗಿದೆ. ಇಲ್ಲಿ ಜಾಗತಿಕ ಆರ್ಥಿಕತೆ ಹಾಗೂ ಅಭಿವೃದ್ಧಿಗೆ ಎದುರಾಗಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT