ಬುಧವಾರ, ಮಾರ್ಚ್ 29, 2023
30 °C

ರಾಕೆಟ್‌ ಎಂಜಿನ್‌ ಪರೀಕ್ಷಾರ್ಥ ಪ್ರಯೋಗ ಮುಂದೂಡಿದ ರಷ್ಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಸ್ಕೊ: ರಷ್ಯಾದ ವೊರೊನೆಜ್‌ ನಗರದಲ್ಲಿ ಕೋವಿಡ್‌ ಪೀಡಿತರಿಗಾಗಿ ಆಮ್ಲಜನಕ ಪೂರೈಕೆಯನ್ನು ವ್ಯವಸ್ಥಿತವಾಗಿಡುವ ಉದ್ದೇಶದಿಂದ ಮಾಸಾಂತ್ಯದವರೆಗೆ ರಾಕೆಟ್‌ ಎಂಜಿನ್‌ಗಳ ಪರೀಕ್ಷಾರ್ಥ ಪ್ರಯೋಗವನ್ನು ತಾತ್ಕಾಲಿಕವಾಗಿ ಕೈಬಿಡಲು ರಷ್ಯಾ ನಿರ್ಧರಿಸಿದೆ.

ಹಿರಿಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ರಷ್ಯಾದಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಶನಿವಾರ ಗಣನೀಯ ಸಂಖ್ಯೆಯಲ್ಲಿ ಸಾವು ದಾಖಲಾಗಿದ್ದು, ಕೋವಿಡ್‌ ಪಿಡುಗು ಕಾಣಿಸಿಕೊಂಡ ನಂತರ ಇದು ಅತ್ಯಧಿಕ ಸಂಖ್ಯೆಯ ಪ್ರಕರಣವಾಗಿದೆ.

ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಕೆಟ್ ಎಂಜಿನ್‌ನ ಪರೀಕ್ಷಾರ್ಥ ಪ್ರಯೋಗವನ್ನು ಮಾಸಾಂತ್ಯದವರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಸಂಸ್ಥೆಯ ಮುಖ್ಯಸ್ಥರು ಭಾನುವಾರ ಟ್ವೀಟ್‌ ಮಾಡಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು