ಕೀವ್: ರಷ್ಯಾದ ಪಡೆಗಳು ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಸೇನಾ ನೆಲೆಯ ಮೇಲೆ ದಾಳಿ ನಡೆಸಿದವು. ಆದರೆ, ಆ ದಾಳಿಯನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಉಕ್ರೇನ್ ಸೇನೆ ಶನಿವಾರ ಮುಂಜಾನೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದೆ.
ರಷ್ಯಾದ ಸೈನಿಕರು ನಗರದ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಒಂದನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಇಂಟರ್‌ಫ್ಯಾಕ್ಸ್ ಉಕ್ರೇನ್ ಏಜೆನ್ಸಿ ತಿಳಿಸಿದೆ.
ರಷ್ಯಾ ದಾಳಿ ಮಾಡಿದಾಗಿನಿಂದ 137 ಜನರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಹೇಳಿಕೊಂಡಿದೆ. ಸುಮಾರು ಒಂದು ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.
‘ನಮ್ಮ ಕರೆಗೆ ಉಕ್ರೇನ್ ಓಗೊಟ್ಟು, ಶಸ್ತ್ರಾಸ್ತ್ರ ಕೆಳಗಿಟ್ಟ ಬಳಿಕ ಯಾವುದೇ ಕ್ಷಣದಲ್ಲಿ ನಾವು ಮಾತುಕತೆಗೆ ಸಿದ್ಧ ಇದ್ದೇವೆ’ ಎಂದು ರಷ್ಯಾದ ವಿದೇಶಾಂಗ ಸಚಿವ ಸರ್ಗೈ ಲಾವ್ರೊವ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.