ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವ ಉಕ್ರೇನ್‌ನಲ್ಲಿ ಸೇನೆ ಬಳಕೆ ಮಾಡುವ ಪುಟಿನ್‌ ಮನವಿಗೆ ರಷ್ಯಾ ಮೇಲ್ಮನೆ ಅಸ್ತು

Last Updated 22 ಫೆಬ್ರುವರಿ 2022, 16:36 IST
ಅಕ್ಷರ ಗಾತ್ರ

ಮಾಸ್ಕೊ: ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳ ಹಿಡಿತದಲ್ಲಿರುವ ಎರಡು ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆ ಮಾಡುವ ಕಾರ್ಯಾಚರಣೆಗೆ ಸಶಸ್ತ್ರ ಪಡೆಗಳನ್ನು ನಿಯೋಜಿಸುವ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮನವಿಗೆ ರಷ್ಯಾದ ಮೇಲ್ಮನೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ.

‘ನಿರ್ಧಾರವು ತಕ್ಷಣವೇ ಜಾರಿಗೆ ಬರಲಿದೆ’ ಎಂದು ಸಂಸದರೊಬ್ಬರು ಹೇಳಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ವಿದೇಶದ ನೆಲದಲ್ಲಿ ಸೇನೆಯನ್ನು ನಿಯೋಜಿಸಲು ಅದಕ್ಕೆ ಸಂಸತ್‌ನ ಅನುಮೋದನೆ ಅಗತ್ಯ. ‌

ಪೂರ್ವ ಉಕ್ರೇನ್‌ನಲ್ಲಿ ಪ್ರತ್ಯೇಕತಾವಾದಿಗಳ ಹಿಡಿತದಲ್ಲಿರುವ ಎರಡು ಪ್ರದೇಶಗಳನ್ನು ಸ್ವತಂತ್ರವೆಂದು ಪುಟಿನ್‌ ಸೋಮವಾರ ಅಂಗೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT