ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಪಾಕಿಸ್ತಾನ ನಡುವಿನ ಮಾತುಕತೆಗೆ ಸೌದಿ ಒಲವು

Last Updated 9 ಮೇ 2021, 9:23 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರ ಸಹಿತ ಬಗೆಹರಿಯದೆ ಉಳಿದಿರುವ ಹಲವು ವಿಷಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮಾತುಕತೆಗೆ ಮಹತ್ವ ನೀಡಬೇಕು ಎಂದು ಸೌದಿ ಆರೇಬಿಯಾ ಹೇಳಿದೆ.

ಸೌದಿ ಅರೇಬಿಯಾದ ಪ್ರವಾಸದಲ್ಲಿರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ರಾಜಕುಮಾರ ಮಹಮ್ಮದ್‌ ಬಿನ್‌ ಸಲ್ಮಾನ್‌ ಈ ನಿಟ್ಟಿನಲ್ಲಿ ಹೊರಡಿಸಿರುವ ಜಂಟಿ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಕಚೇರಿ ಬಿಡುಗಡೆ ಮಾಡಿದೆ.

‘ಕಾಶ್ಮೀರ ಗಡಿಯಲ್ಲಿ ಉದ್ನಿಗ್ನತೆ ಶಮನಗೊಳಿಸಲು ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮದ ಎಲ್ಲಾ ಒಪ್ಪಂದಗಳನ್ನು ಪಾಲಿಸಲು ಸಮ್ಮತಿ ಸೂಚಿಸಿರುವುದು ಸ್ವಾಗತಾರ್ಹ’ ಎಂದು ಸೌದಿ ರಾಜಕುಮಾರ ಹೇಳಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT