ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶ ಪ್ರಯಾಣ ಕೈಗೊಳ್ಳುವವರು ಬೂಸ್ಟರ್‌ ಡೋಸ್‌ ಪಡೆಯುವುದು ಕಡ್ಡಾಯ: ಸೌದಿ

Last Updated 4 ಫೆಬ್ರುವರಿ 2022, 10:29 IST
ಅಕ್ಷರ ಗಾತ್ರ

ರಿಯಾದ್:‌ ಕೋವಿಡ್‌ ಬೂಸ್ಟರ್‌ ಡೋಸ್‌ ಪಡೆದುಕೊಂಡಿರುವವರಿಗೆ ಮಾತ್ರವೇ ವಿದೇಶಗಳಿಗೆ ಪ್ರಯಾಣಿಸಲು ಫೆಬ್ರುವರಿ9ರಿಂದ ಅವಕಾಶ ಕಲ್ಪಿಸಲಾಗುವುದು ಎಂದು ಸೌದಿ ಅರೇಬಿಯಾ ಘೋಷಿಸಿದೆ.

ಸ್ಥಳೀಯ ಮತ್ತು ಜಾಗತಿಕವಾಗಿ ಸಾಂಕ್ರಾಮಿಕದ ಪರಿಸ್ಥಿತಿಯ ನಿರಂತರ ಅವಲೋಕನವನ್ನು ಆಧರಿಸಿ ಈಕ್ರಮ ಕೈಗೊಳ್ಳಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸೇರಿದಂತೆಕೆಲ ಗುಂಪಿನ ಜನರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.ಇದೇ ವೇಳೆ ವಿದೇಶಗಳಿಂದ ಬರುವ ಸೌದಿ ನಾಗರಿಕರು ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿ ನೀಡಿದರೆ ದೇಶದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದುಎಂದೂಹೇಳಲಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೋವಿಡ್‌ ದೃಢಪಟ್ಟ 3,852 ಹೊಸ ಪ್ರಕರಣಗಳು ಗುರುವಾರ ವರದಿಯಾಗಿವೆ. ಇದರೊಂದಿಗೆ, ಸಾಂಕ್ರಾಮಿಕ ಕಾಣಿಸಿಕೊಂಡಾಗಿನಿಂದ ಇಲ್ಲಿಯವರೆಗೆ ಸೌದಿಯಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ6,99,069ಕ್ಕೆ ಏರಿದೆ. ಈ ಪೈಕಿ6,53,972 ಸೋಂಕಿತರು ಗುಣಮುಖರಾಗಿದ್ದು,8,947 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT