ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಜ್‌ ಯಾತ್ರೆ 60 ಸಾವಿರ ಯಾತ್ರಿಕರಿಗೆ ಸೀಮಿತ: ಸೌದಿ ಅರೇಬಿಯಾ

Last Updated 12 ಜೂನ್ 2021, 13:16 IST
ಅಕ್ಷರ ಗಾತ್ರ

ದುಬೈ: ಕೊರೊನಾ ವೈರಸ್‌ ಸಾಂಕ್ರಾಮಿಕದ ಕಾರಣಕ್ಕೆ ಈ ವರ್ಷದ ಹಜ್ ಯಾತ್ರೆಯನ್ನು ತನ್ನ ದೇಶದ 60 ಸಾವಿರ ಯಾತ್ರಿಕರಿಗೆ ಮಾತ್ರ ಸೀಮಿತಗೊಳಿಸಿರುವುದಾಗಿ ಸೌದಿ ಅರೇಬಿಯಾ ಸರ್ಕಾರ ಶನಿವಾರ ಪ್ರಕಟಿಸಿದೆ. ಹಾಗೆಯೇ ವಿದೇಶದವರಿಗೆ ಹಜ್‌ ಯಾತ್ರೆಯನ್ನು ನಿಷೇಧಿಸಿದೆ.

ಕಳೆದ ವರ್ಷ ಕೋವಿಡ್‌ನಿಂದಾಗಿ ಹಜ್‌ ಯಾತ್ರೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಯಾತ್ರಿಕರು ಪಾಲ್ಗೊಂಡಿದ್ದರು. ಈ ವರ್ಷವೂ ಯಾತ್ರಿಕರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ ಎಂದು ಸೌದಿ ಅರೇಬಿಯಾ ಘೋಷಿಸಿದೆ.

ಸೌದಿ ಸರ್ಕಾರದ ಹಜ್ ಮತ್ತು ಉಮ್ರಾ ಸಚಿವಾಲಯದ ಹೇಳಿಕೆಯನ್ನು ಸೌದಿ ಸರ್ಕಾರದ ಪ್ರೆಸ್ ಏಜೆನ್ಸಿ ಪ್ರಕಟಿಸಿದ್ದು, ಜುಲೈ ಮಧ್ಯದಲ್ಲಿ ಪ್ರಾರಂಭವಾಗಲಿರುವ ಈ ವರ್ಷದ ಹಜ್ 18ರಿಂದ 65 ವಯಸ್ಸಿನ ಯಾತ್ರಿಕರಿಗೆ ಮಾತ್ರ ಸೀಮಿತವಾಗಿರುತ್ತದೆ. ಅಲ್ಲದೆ, ಯಾತ್ರೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT