ಶುಕ್ರವಾರ, ಆಗಸ್ಟ್ 6, 2021
22 °C
ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ

ಕೋವಿಡ್‌ನ ಮತ್ತೊಂದು ಅಲೆ: ಲಸಿಕೆ ನೀಡಿಕೆಗೆ ವೇಗ ಅಗತ್ಯ –ವಿಶ್ವ ಆರೋಗ್ಯ ಸಂಸ್ಥೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19ನ ಮತ್ತೊಂದು ಅಲೆಯನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಬೇಕು, ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಬೇಕು ಎಂದು ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಭಾನುವಾರ ಸಲಹೆ ನೀಡಿದೆ.

ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರ ಪತ್ತೆ ಹಚ್ಚಿ, ಅವರ ಪ್ರತ್ಯೇಕ ವಾಸಕ್ಕೆ ಕ್ರಮ ಕೈಗೊಳ್ಳಬೇಕು. ಸರಿಯಾದ ಕ್ರಮದಲ್ಲಿ ಮಾಸ್ಕ್‌ ಧರಿಸುವ ಜೊತೆಗೆ, ಕೈಗಳ ಶುಚಿತ್ವಕ್ಕೆ ಗಮನ ನೀಡುವುದು ಅಗತ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾದ ನಿರ್ದೇಶಕಿ ಪೂನಂ ಖೇತ್ರಪಾಲ್‌ ಸಿಂಗ್‌ ಹೇಳಿದರು.

‘ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದರಲ್ಲೂ, ಕೊರೊನಾ ವೈರಸ್‌ನ ರೂಪಾಂತರ ತಳಿಗಳು ವೇಗವಾಗಿ ಪ್ರಸರಣವಾಗುತ್ತಿರುವುದು ಕಂಡುಬಂದಿರುವ ಪ್ರದೇಶಗಳಲ್ಲಿ ಈ ಕ್ರಮಗಳನ್ನು ದೀರ್ಘ ಕಾಲದ ವರೆಗೆ ಪಾಲಿಸುವುದು ಮುಖ್ಯ’ ಎಂದೂ ಅವರು ಹೇಳಿದರು.

ಮಾಲ್ಡೀವ್ಸ್‌ ಹಾಗೂ ಮ್ಯಾನ್ಮಾರ್‌ನಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿಯ ಪ್ರಸರಣ ಈ ವಾರ ಕಂಡುಬಂದಿದೆ. ಭಾರತ, ಬಾಂಗ್ಲಾದೇಶ, ಇಂಡೊನೇಷ್ಯಾ, ನೇಪಾಳ, ಶ್ರೀಲಂಕಾ ಹಾಗೂ ಥಾಯ್ಲೆಂಡ್‌ನಲ್ಲಿ ಈಗಾಗಲೇ ಈ ತಳಿಯ ಸೋಂಕಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಸಲಹೆಗಳನ್ನು ನೀಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು