ಬುಧವಾರ, ಜೂನ್ 16, 2021
28 °C

ಕೋವಿಡ್‌ನಿಂದ ಮಕ್ಕಳ ರೋಗನಿರೋಧಕ ಶಕ್ತಿ ಕ್ಷೀಣ : ಅಧ್ಯಯನದ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಕೋವಿಡ್‌–19ನಿಂದ ಬಳಲುವ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕ್ಷೀಣಿಸುತ್ತದೆ. ಇದರಿಂದ ಅವರ ರಕ್ತನಾಳಗಳಲ್ಲಿ ವಿಪರೀತ ಊತ, ಹೃದಯ ತೊಂದರೆಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ವಿಜ್ಞಾನಿಗಳು ನಡೆಸಿದ ಅಧ್ಯಯನದಿಂದ ಕಂಡುಬಂದಿದೆ.

ಕೋವಿಡ್‌ನಿಂದ ಬಳಲುವವರಿಗೆ ನೀಡುವ ಚಿಕಿತ್ಸೆಯಲ್ಲಿ ಸುಧಾರಣೆ ತರಲು ಈ ಸಂಶೋಧನೆ ನೆರವಾಗಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಲಂಡನ್‌ನ ಕಿಂಗ್ಸ್‌ ಕಾಲೇಜ್‌ ಸಂಶೋಧಕರು ನಡೆಸಿದ ಅಧ್ಯಯನದ ವರದಿ ‘ನೇಚರ್‌ ಮೆಡಿಸಿನ್‌’ ನಿಯತಕಾಲಿಕದಲ್ಲಿ ಪ್ರಕಟವಾಗಿದೆ. 

ಕೋವಿಡ್‌–19ನಿಂದ ಬಳಲುವ ಕೆಲವು ಮಕ್ಕಳಲ್ಲಿ ಅಪರೂಪದ ಕಾಯಿಲೆ ಕಾಣಿಸಿಕೊಳ್ಳಲಿದ್ದು, ಇದನ್ನು ‘ಪೀಡಿಯಾಟ್ರಿಕ್‌ ಇನ್‌ಫ್ಲಮೇಟರಿ ಮಲ್ಟಿಸಿಸ್ಟಂ ಸಿಂಡ್ರೋಮ್‌’ (ಪಿಐಎಂಎಸ್‌–ಟಿಎಸ್‌) ಎಂದು ಹೆಸರಿಸಲಾಗಿದೆ. ಈ ಕಾಯಿಲೆ ಮತ್ತು ಕಾವಾಸಾಕಿ ರೋಗದ ಲಕ್ಷಣಗಳಲ್ಲಿ ಸಾಕಷ್ಟು ಸಾಮ್ಯತೆ ಇದೆ ಎಂದು ಸಂಶೋಧಕರು ಹೇಳಿದ್ದಾರೆ.

‘ಪಿಐಎಂಎಸ್‌–ಟಿಎಸ್‌ನಿಂದಾಗಿ ರಕ್ತನಾಳಗಳಲ್ಲಿ ವಿಪರೀತ ಊತ ಕಾಣಿಸಿಕೊಂಡು, ಕೆಲವೊಮ್ಮೆ ಹೃದಯಾಘಾತಕ್ಕೂ ಕಾರಣವಾಗುತ್ತದೆ’ ಎಂದೂ ವಿವರಿಸಿದ್ದಾರೆ. 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು