ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌ನಲ್ಲಿ ಮುಂದುವರಿದ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗ

Last Updated 28 ಫೆಬ್ರುವರಿ 2021, 8:29 IST
ಅಕ್ಷರ ಗಾತ್ರ

ಯಾಂಗೂನ್‌: ಮ್ಯಾನ್ಮಾರ್‌ನ ಯಾಂಗೂನ್‌ನಲ್ಲಿ ಮಿಲಿಟರಿ ಆಡಳಿತವನ್ನು ವಿರೋಧಿಸಿ ಭಾನುವಾರವೂ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.

ಹ್ಲೆಡಾನ್‌ನ ಯಾಂಗೂನ್‌ ನಗರದಲ್ಲಿ ಭಾನುವಾರ ಬೆಳಿಗ್ಗೆ ಪ್ರತಿಭಟನೆ ಆರಂಭವಾಗಿದ್ದು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಈ ಪ್ರತಿಭಟನೆ ಭಾಗಿಯಾಗಿದ್ದರು. ಈ ವೇಳೆ ಹಲವು ಪ್ರತಿಭಟನಕಾರರನ್ನು ಬಂಧಿಸಲಾಗಿದೆ.

ಮಿಲಿಟರಿ ಆಡಳಿತ ವಿರೋಧಿಸಿ ಮ್ಯಾನ್ಮಾರ್‌ನಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ದಿನ ಕಳೆಯುತ್ತಿದ್ದಂತೆ ಪ್ರತಿಭಟನಕಾರರ ಮೇಲೆ ಸೇನೆ ನಡೆಸುತ್ತಿರುವ ಹಿಂಸಾಚಾರವೂ ಹೆಚ್ಚಾಗಿವೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಿಶೇಷ ಅಧಿವೇಶನದಲ್ಲಿ ಮ್ಯಾನ್ಮಾರ್‌ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ವೇಳೆ ಮ್ಯಾನ್ಮಾರ್‌ನ ವಿಶ್ವಸಂಸ್ಥೆಯ ರಾಯಭಾರಿ ಅವರು ಆಂಗ್ ಸಾನ್ ಸೂಕಿ ಸರ್ಕಾರದ ಪರ ಬೆಂಬಲ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT