ಭಾನುವಾರ, ಸೆಪ್ಟೆಂಬರ್ 20, 2020
22 °C

ಮಂಗೋಲಿಯಾದಲ್ಲಿ ಪ್ಲೇಗ್‌ಗೆ ಮತ್ತೊಂದು ಸಾವು

ಎಪಿ Updated:

ಅಕ್ಷರ ಗಾತ್ರ : | |

ಬೀಜಿಂಗ್‌: ಚೀನಾದ ಉತ್ತರ ಭಾಗದಲ್ಲಿರುವ ಮಂಗೋಲಿಯಾದಲ್ಲಿ ಪ್ಲೇಗ್‌ಗೆ ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ. 

ಬ್ಯುಬೋನಿಕ್‌ ಪ್ಲೇಗ್‌ನಿಂದ ಈ ವಾರದಲ್ಲಿ ಸಂಭವಿಸಿದ ಎರಡನೇ ಸಾವು ಇದಾಗಿದೆ. ಈ ಸೋಂಕಿಗೆ ಒಳಗಾಗಿದ್ದ ರೋಗಿಯೊಬ್ಬರು  ಬಹುಅಂಗಾಗ ವೈಫಲ್ಯದಿಂದ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಬಯಾನೋರ್‌ ನಗರ ಆರೋಗ್ಯ ಆಯುಕ್ತರು ತಿಳಿಸಿದ್ದಾರೆ.

ಮೃತಪಟ್ಟ ರೋಗಿ ವಾಸಿಸುತ್ತಿದ್ದ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದ್ದು, ರೋಗಿಯ ಜೊತೆ ಸಂಪರ್ಕವಿದ್ದ ಏಳು ಜನರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಸಂಪರ್ಕದಲ್ಲಿ ಇದ್ದವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್‌ ಬಂದಿದ್ದು, ಅವರಿಗೆ ಸೋಂಕಿನ ಲಕ್ಷಣಗಳು ಇಲ್ಲ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು