ಭಾನುವಾರ, ಏಪ್ರಿಲ್ 2, 2023
33 °C

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ : ಏಳು ಮಂದಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಲಾಸ್ ಏಂಜಲೀಸ್: ಉತ್ತರ ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇನಲ್ಲಿ ನಡೆದ ಎರಡು ಗುಂಡಿನ ದಾಳಿಯಲ್ಲಿ ಏಳು ಜನ ಸಾವಿಗೀಡಾಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.

‘ಹೈವೇ 92 ಮತ್ತು ಹಾಫ್ ಮೂನ್ ಬೇ ನಗರ ಮಿತಿಗಳಲ್ಲಿ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಓರ್ವ ಶಂಕಿತ ಆರೋಪಿ ಬಂಧನದಲ್ಲಿದ್ದಾನೆ. ಸಾರ್ವಜನಿಕರಿಗೆ ಸದ್ಯಕ್ಕೆ ಯಾವುದೇ ಬೆದರಿಕೆ, ಅಪಾಯವಿಲ್ಲ’ ಎಂದು ಸ್ಥಳೀಯ ಕಾನೂನು ಸುವ್ಯವಸ್ಥೆ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದಾರೆ.

ಎರಡು ಪ್ರತ್ಯೇಕ ಘಟನೆಗಳು ಸ್ಯಾನ್ ಫ್ರಾನ್ಸಿಸ್ಕೋದ ದಕ್ಷಿಣದ ಸಮೀಪದ ಕೃಷಿ ಪ್ರದೇಶಗಳಲ್ಲಿಯೇ ಸಂಭವಿಸಿವೆ. ಮೌಂಟೇನ್ ಮಶ್ರೂಮ್ ಫಾರ್ಮ್‌ನಲ್ಲಿನ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದು, ಓರ್ವ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರೈಸ್ ಫಾರ್ಮ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಲಾಸ್ ಏಂಜಲೀಸ್ ಬಳಿಯ ಡ್ಯಾನ್ಸ್ ಸ್ಟುಡಿಯೋದಲ್ಲಿ ಬಂದೂಕುಧಾರಿಯೊಬ್ಬ 11 ಜನರನ್ನು ಹತ್ಯೆಗೈದ 48 ಗಂಟೆಗಳಲ್ಲಿಯೇ ಮತ್ತೆರಡು ದಾಳಿ ನಡೆದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು