ಶನಿವಾರ, ಡಿಸೆಂಬರ್ 4, 2021
26 °C

ರೋಹಿಂಗ್ಯಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ: ಏಳು ಮಂದಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಬಲುಖಲಿ (ಬಾಂಗ್ಲಾದೇಶ): ಬಾಂಗ್ಲಾದೇಶ–ಮ್ಯಾನ್ಮಾರ್ ಗಡಿಯಲ್ಲಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿನ ಇಸ್ಲಾಮಿಕ್ ಸೆಮಿನರಿ ಮೇಲೆ ಶುಕ್ರವಾರ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಕನಿಷ್ಠ ಏಳು ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಬಿರದ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಕೆಲವರನ್ನು ಹೊಡೆದುರುಳಿಸಿ, ಇನ್ನೂ ಕೆಲವರನ್ನು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ ಎಂದು ಪ್ರಾದೇಶಿಕ ಪೊಲೀಸ್ ಮುಖ್ಯಸ್ಥರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೂರು ವಾರಗಳ ಹಿಂದೆ ರೋಹಿಂಗ್ಯಾ ಸಮುದಾಯದ ನಾಯಕನನ್ನು ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಕೊಂದ ನಂತರ ಈ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಈ ಘಟನೆಯ ನಂತರ ಕೊಲೆಗಳು ನಡೆದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು