ಗುರುವಾರ , ಆಗಸ್ಟ್ 18, 2022
25 °C

ಅಮೆರಿಕದಲ್ಲಿ ಶೂಟೌಟ್‌: ಪೊಲೀಸ್‌ ಅಧಿಕಾರಿ ಸೇರಿ ಹಲವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದ ವಾಷಿಂಗ್ಟನ್‌ ಡಿ.ಸಿಯಲ್ಲಿ ಶೂಟೌಟ್‌ ನಡೆದಿದ್ದು ಒಬ್ಬ ಪೊಲೀಸ್‌ ಅಧಿಕಾರಿ ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಶೂಟೌಟ್‌ ಪ್ರಕರಣ ನಡೆದಿರುವುದನ್ನು ಅಮೆರಿಕ ಪೊಲೀಸರು ಖಚಿತಪಡಿಸಿದ್ದಾರೆ. ಆದರೆ ಅವರು ಘಟನೆಯ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳು ಹೇಳಿವೆ. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು