ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸಾರ್ಜೆಂಟ್ ಆತ್ಮಹತ್ಯೆ ಪ್ರಕರಣ: ದ.ಕೊರಿಯಾದ ವಾಯುಪಡೆ ಮುಖ್ಯಸ್ಥ ರಾಜೀನಾಮೆ

ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ
Last Updated 4 ಜೂನ್ 2021, 10:34 IST
ಅಕ್ಷರ ಗಾತ್ರ

ಸೋಲ್‌: ದಕ್ಷಿಣ ಕೊರಿಯಾದಲ್ಲಿ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಮಾಸ್ಟರ್‌ ಸಾರ್ಜೆಂಟ್‌ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೇಶದ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ವಾಯುಪ‍ಡೆ ಮುಖ್ಯಸ್ಥರು ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

‘ವಾಯುಸೇನೆ ಮುಖ್ಯಸ್ಥ ಜನರಲ್‌ ಲೀ ಸಿಯೊಂಗ್-ಯೋಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ’ ಎಂದು ಅಧ್ಯಕ್ಷ ಜೇ ಇನ್‌ ಅವರ ಕಚೇರಿಯು ಹೇಳಿದೆ.

‘ಭೋಜನ ಕೂಟದಿಂದ ಸೇನಾ ಶಿಬಿರಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರಿನಲ್ಲಿ ಮಹಿಳಾ ಸಾರ್ಜೆಂಟ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ವಾಯುಸೇನೆಯ ಮಾಸ್ಟರ್‌ ಸಾರ್ಜೆಂಟ್‌ವೊಬ್ಬರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಲೀ ಅವರು ರಾಜೀನಾಮೆ ನೀಡಿದ್ದಾರೆ’ ಎಂದು ರಕ್ಷಣಾ ಸಚಿವಾಲಯವು ತಿಳಿಸಿದೆ.

‘ಈ ಬಗ್ಗೆ ಮಹಿಳಾ ಸಾರ್ಜೆಂಟ್‌ ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೆ ಅವರು ಈ ಪ್ರಕರಣವನ್ನು ಮುಚ್ಚಿಡಲು ಪ್ರಯತ್ನಿಸಿದರು. ಅಲ್ಲದೆ ಒಪ್ಪಂದ ಮಾಡಿಕೊಳ್ಳಲು ಹೇಳಿದರು’ ಎಂದು ಆರೋಪಿಸಿ ಸಂತ್ರಸ್ತೆಯ ಕುಟುಂಬದವರು ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದರು.

ಈ ಕೃತ್ಯವೆಸಗಿದ ಅಧಿಕಾರಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ 3.40 ಲಕ್ಷಕ್ಕೂ ಅಧಿಕ ಮಂದಿಅರ್ಜಿಯೊಂದಕ್ಕೆ ಸಹಿ ಹಾಕಿದ್ದರು ಹಾಗೂ ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT