ಶುಕ್ರವಾರ, ಜುಲೈ 1, 2022
28 °C

ಕೋವಿಡ್–19: ಶಾಂಘೈನಲ್ಲಿ ಹೊಸದಾಗಿ 12 ಸೋಂಕಿತರ ಸಾವು

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಶಾಂಘೈ: ಚೀನಾದ ಎರಡನೇ ಅತಿ ದೊಡ್ಡ ನಗರ ಶಾಂಘೈನಲ್ಲಿ ಕೋವಿಡ್‌–19 ಪರಿಸ್ಥಿತಿ ಬಿಗಡಾಯಿಸಿದ್ದು, ಹೊಸದಾಗಿ 12 ಜನರು ಶುಕ್ರವಾರ ಮೃತಪಟ್ಟಿದ್ದಾರೆ. ಗುರುವಾರ (ಏ.21) 11 ಸೋಂಕಿತರು ಮೃತಪಟ್ಟಿದ್ದರು.

ಶಾಂಘೈನಲ್ಲಿ ಕಠಿಣ ಲಾಕ್‌ಡೌನ್‌ ಜಾರಿಯಲ್ಲಿದ್ದರೂ, ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ನಗರದಲ್ಲಿ ಶುಕ್ರವಾರ ಲಕ್ಷಣ ರಹಿತ 20,634 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಏಪ್ರಿಲ್‌ 21ರಿಂದೀಚೆಗೆ ಲಕ್ಷಣಸಹಿತ ಸೋಂಕು ಪ್ರಕರಣಗಳ ಸಂಖ್ಯೆ 2,736ಕ್ಕೆ ಏರಿದೆ ಎಂದು ಅಲ್ಲಿನ ಸರ್ಕಾರದ ದಾಖಲೆಗಳಿಂದ ತಿಳಿದುಬಂದಿದೆ.

ಇದನ್ನೂ ಓದಿಶಾಂಘೈ: ಏ. 26ರ ವರೆಗೆ ಲಾಕ್‌ಡೌನ್‌ ವಿಸ್ತರಣೆ

ಮೃತಪಟ್ಟವರೆಲ್ಲರ ಸರಾಸರಿ ವಯಸ್ಸು 88 ಆಗಿದ್ದು, ಅವರೆಲ್ಲ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಶಾಂಘೈ ಅಧಿಕಾರಿಗಳು ತಿಳಿಸಿದ್ದಾರೆ.

ವಯಸ್ಸಾದವರಿಗೆ ತುರ್ತಾಗಿ ಬೂಸ್ಟರ್‌ ಡೋಸ್‌ ಲಸಿಕೆ ನೀಡುವುದನ್ನು ಹೆಚ್ಚಿಸುವುದು ಅನಿವಾರ್ಯವಾಗಿರುವ ಕಾರ್ಯತಂತ್ರವಾಗಿದೆ ಎಂದು ಶಾಂಘೈ ಕೋವಿಡ್‌ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಆಸ್ಟ್ರೇಲಿಯಾದ ಸಾರ್ವಜನಿಕ ಆರೋಗ್ಯ ತಜ್ಞ ಜಯ ಡಂಟಾಸ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು