ಸೋಮವಾರ, ಮೇ 23, 2022
20 °C

ಶಾಂಘೈ: ಕೋವಿಡ್‌ನಿಂದ ಏಳು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌ (ಪಿಟಿಐ): ಚೀನಾದ ವಾಣಿಜ್ಯ ನಗರಿ ಶಾಂಘೈನಲ್ಲಿ ಕೋವಿಡ್‌–19 ನಿಂದಾಗಿ ಮತ್ತೆ ಏಳು ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 21,400 ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 4,648 ಕ್ಕೆ ಏರಿದೆ.

‘ಕೋವಿಡ್‌ನಿಂದ ಶಾಂಘೈನಲ್ಲಿ ಸೋಮವಾರ ಏಳು ಮಂದಿ ಮೃತಪಟ್ಟ ವರದಿಯಾಗಿದೆ. ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿವೆ. 2019ರಿಂದ ಈವರೆಗೆ 4,648 ಮಂದಿ ಮೃತಪಟ್ಟಿದ್ದಾರೆ’ ಎಂಬುವುದು ಚೀನಾದ ರಾಷ್ಟ್ರೀಯ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ಗೊತ್ತಾಗಿದೆ.

ಮೃತಪಟ್ಟವರು ಹೃದ್ರೋಗ, ರಕ್ತನಾಳ ಸಂಬಂಧಿ ಕಾಯಿಲೆ, ಮಧುಮೇಹ, ಅಧಿಕ ರಕ್ತದೊಡ್ಡಡ ಹಾಗೂ ಮಿದುಳಿನ ರಕ್ತಸ್ರಾವದಂತಹ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು