ಭಾನುವಾರ, ಮೇ 22, 2022
22 °C

ಯುಎಇ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್‌ ಅವರು ಯುಎಇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

ಯುಎಇ ಅಧ್ಯಕ್ಷರಾಗಿದ್ದ ಶೇಖ್‌ ಖಲೀಫಾ ಬಿನ್ ಜಾಯೆದ್‌ ಅಲ್ ನಹ್ಯಾನ್ ಅವರು ಶುಕ್ರವಾರ ನಿಧರಾಗಿದ್ದಾರೆ. ಆ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಫೆಡರಲ್ ಸುಪ್ರೀಂ ಕೌನ್ಸಿಲ್ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದೆ ಎಂದು ಸುದ್ದಿಸಂಸ್ಥೆ ‘ಡಬ್ಲ್ಯೂಎಎಂ’ ವರದಿ ಮಾಡಿದೆ. 

ಶೇಕ್ ಖಲೀಫಾ ಅವರು ಯುಎಇ ಅಧ್ಯಕ್ಷರಾಗಿ ಹಾಗೂ ಅಬುಧಾಬಿಯ ದೊರೆಯಾಗಿ 2004, ನವೆಂಬರ್‌ 3ರಿಂದ ಕಾರ್ಯನಿರ್ವಹಿಸಿದ್ದರು.

ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಶೇಕ್‌ ಖಲೀಫಾ ಅವರ ನಿಧನಕ್ಕೆ ಸಂತಾಪ ಸೂಚಿಸಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು