ಗುರುವಾರ , ಜೂನ್ 24, 2021
28 °C

ಅಮೆರಿಕ: ಬಸ್‌ ಮೇಲೆ ಗುಂಡಿನ ದಾಳಿ, ಇಬ್ಬರ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಒಕ್ಲ್ಯಾಂಡ್(ಅಮೆರಿಕ): ‘ಸ್ಯಾನ್‌ಫ್ರಾನ್ಸಿಸ್ಕೊದಲ್ಲಿ ಮಂಗಳವಾರ ಮುಂಜಾನೆ ಪಾರ್ಟಿ ಬಸ್‌ವೊಂದನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಐದು ಮಂದಿಗೆ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಸ್ಯಾನ್‌ಫ್ರಾನ್ಸಿಸ್ಕೊದಿಂದ ಒಕ್ಲ್ಯಾಂಡ್‌ಗೆ ಮರಳುತ್ತಿದ್ದ ವೇಳೆ ಕ್ಯಾಲಿಫೋರ್ನಿಯಾ ಹೆದ್ದಾರಿ ಬಳಿ ಪಾರ್ಟಿ ಬಸ್‌ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ಬಸ್‌ನಲ್ಲಿ ಮಹಿಳೆಯೊಬ್ಬರ 21ನೇ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿತ್ತು’ ಎಂದು ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

‘ವಾಹನವೊಂದರಿಂದ ಇಬ್ಬರು ಬಂದೂಕುದಾರಿಗಳು ಈ ದಾಳಿ ನಡೆಸಿದ್ದು, ಬಸ್ಸಿನ ಮೇಲೆ 70 ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆ. ಇದು ಪೂರ್ವಯೋಜಿತ ದಾಳಿಯಂತೆ ಕಾಣುತ್ತಿದೆ’ ಎಂದು ಕ್ಯಾಲಿಫೋರ್ನಿಯಾ ಹೆದ್ದಾರಿ ಗಸ್ತು ಪಡೆಯು ಹೇಳಿದೆ.

ಈ ಪ್ರಕರಣದ ಬಗ್ಗೆ ಒಕ್ಲ್ಯಾಂಡ್ ಪೊಲೀಸ್‌ ಮತ್ತು ಕ್ಯಾಲಿಫೋರ್ನಿಯಾ ಹೆದ್ದಾರಿ ಗಸ್ತು ಪಡೆಯು ತನಿಖೆ ನಡೆಸುತ್ತಿದೆ.

‘ಈ ದಾಳಿಯಲ್ಲಿ ಒಬ್ಬರು ಮಹಿಳೆ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಪರಿಸ್ಥಿತಿ ಬಹಳ ಗಂಭೀರವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು