ಮಂಗಳವಾರ, ಮೇ 11, 2021
24 °C
ಮಾರ್ಚ್ 13ರ ಬಳಿಕ ಕೊರೊನಾದಿಂದ ಮೊದಲ ಸಾವು

ಸಿಂಗಪುರ: ಒಂದೂವರೆ ತಿಂಗಳಲ್ಲಿ ಕೋವಿಡ್‌ನಿಂದ ಮೊದಲ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸಿಂಗಪುರ: ಸಿಂಗಪುರದಲ್ಲಿ ಒಂದೂವರೆ ತಿಂಗಳ ಬಳಿಕ ವೃದ್ಧರೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 

ಮಾರ್ಚ್ 13ರಂದು ಕೋವಿಡ್‌ನಿಂದ 61 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ಆನಂತರ ಕೋವಿಡ್‌ನಿಂದ ಯಾರೂ ಮೃತಪಟ್ಟಿರಲಿಲ್ಲ. ಶನಿವರ 88ರ ವೃದ್ಧೆಯೊಬ್ಬರು ಮೃತಪಟ್ಟರು. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ ಕೇವಲ 31. ಶನಿವಾರ 34 ಹೊಸ ಪ್ರಕರಣಗಳು ವರದಿಯಾಗಿವೆ.

ಸಿಂಗಪುರದಲ್ಲಿ ಇದುವರೆಗೆ 61,179 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 60,765 ಮಂದಿ ಚೇತರಿಸಿಕೊಂಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು