ಶುಕ್ರವಾರ, ಅಕ್ಟೋಬರ್ 22, 2021
21 °C

ಶೇ 80ರಷ್ಟು ಜನರಿಗೆ ಲಸಿಕೆ ನೀಡಿದ್ದರೂ ಸಿಂಗಪುರದಲ್ಲಿ ಕೋವಿಡ್‌ ಉಲ್ಬಣ!

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಸಿಂಗಪುರ: ಸಿಂಗಪುರದಲ್ಲಿ ಶನಿವಾರ ಈ ವರೆಗಿನ ಅತ್ಯಧಿಕ ಪ್ರಮಾಣದ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಒಟ್ಟು 3,703 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದು ಕೋವಿಡ್‌ ಮಹಾಮಾರಿ ಉದ್ಭವಿಸಿದಾಗಿನಿಂದ ಈ ವರೆಗೆ ವರದಿಯಾದ ಅತಿ ಹೆಚ್ಚಿನ ಪ್ರಕರಣ ಎಂದು ಆರೋಗ್ಯ ಇಲಾಖೆ ಹೇಳಿದೆ. ಇದೇ ವೇಳೆ 11 ಸಾವುಗಳೂ ಸಂಭವಿಸಿವೆ.

ಕೆಲವು ನಿರ್ಬಂಧಗಳ ಸಡಿಲಿಕೆಯಿಂದಾಗಿ ಸಿಂಗಪುರದಲ್ಲಿ ಕೋವಿಡ್‌ ಉಲ್ಬಣಗೊಂಡಿದೆ. ಹೀಗಾಗಿ ಮುಂದಿನ ನಿರ್ಬಂಧಗಳ ಸಡಿಲಿಕೆಗೆ ವಿರಾಮ ಬಿದ್ದಿದೆ. ಕಳೆದ ವಾರದಿಂದಲೇ ನಿರ್ಬಂಧಗಳನ್ನು ಬಿಗಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ನಿಷೇಧಿಸಲಾಗಿದೆ. ನೌಕರರು ಮನೆಯಿಂದಲೇ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಿಂಗಪುರದ ಒಟ್ಟು ಜನಸಂಖ್ಯೆಯ ಶೇ 80 ಕ್ಕಿಂತ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು