ಮಂಗಳವಾರ, ನವೆಂಬರ್ 30, 2021
22 °C

ಸಿಂಗಪುರದಲ್ಲಿ ಕೋವಿಡ್ ಹೊಸ ಪ್ರಕರಣಗಳು ಹೆಚ್ಚಳ; ಈವರೆಗಿನ ಗರಿಷ್ಠ ಸಂಖ್ಯೆ ದಾಖಲು

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ರಾಯಿಟರ್ಸ್: ಸಿಂಗಪುರದಲ್ಲಿ ಕೋವಿಡ್‌–19 ದೃಢಪಟ್ಟ 5,324 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್‌ ಸಾಂಕ್ರಾಮಿಕದ ಆರಂಭದಿಂದ ದಾಖಲಾಗಿರುವ ಪ್ರಕರಣಗಳ ಪೈಕಿ ಗರಿಷ್ಠ ಪ್ರಮಾಣ ಬುಧವಾರ ವರದಿಯಾಗಿದೆ.

ಇದೇ ಅವಧಿಯಲ್ಲಿ ಕೋವಿಡ್‌ ಕಾರಣಗಳಿಂದಾಗಿ 10 ಮಂದಿ ಸಾವಿಗೀಡಾಗಿದ್ದಾರೆ. ಮಂಗಳವಾರ ಕೋವಿಡ್‌ ದೃಢಪಟ್ಟ 3,277 ಪ್ರಕರಣಗಳು ದಾಖಲಾಗಿದ್ದವು.

ಕೋವಿಡ್‌ ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಿದ ಬಳಿಕ ಇತ್ತೀಚೆಗೆ ಕೊರೊನಾ ವೈರಸ್‌ ಸೋಂಕು ಪ್ರಮಾಣ ಹೆಚ್ಚಳವಾಗಿದ್ದು, ಮತ್ತಷ್ಟು ನಿರ್ಬಂಧ ಸಡಿಲಿಕೆಗೆ ಅಡ್ಡಿಯುಂಟಾಗಿದೆ. ಸಾಮಾಜಿಕವಾಗಿ ಜನರು ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಯಮಗಳನ್ನು ಮುಂದುವರಿಸಲಾಗಿದೆ.

ಸಿಂಗಪುರದ ಶೇ 80ಕ್ಕೂ ಹೆಚ್ಚು ಜನರಿಗೆ ಕೋವಿಡ್‌–19 ಲಸಿಕೆಗೆ ಹಾಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು