ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ

Last Updated 28 ಆಗಸ್ಟ್ 2022, 14:21 IST
ಅಕ್ಷರ ಗಾತ್ರ

ಕೊಲಂಬೊ: ತನ್ನ ದೇಶದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು 6 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ, ಟ್ರಾಲರ್‌ಗಳನ್ನು ವಶಪಡಿಸಿಕೊಂಡಿದೆ.

‘ಮನ್ನಾರ್‌ ದ್ವೀಪದ ವಸಾಹತು ಪ್ರದೇಶವಾದ ತಲೈಮನ್ನಾರ್‌ನಲ್ಲಿ ಶನಿವಾರ ಮೀನುಗಾರರನ್ನು ಬಂಧಿಸಲಾಗಿದೆ. ನೌಕಾಪಡೆಯ ಬಂಧನದಲ್ಲಿರುವ ಮೀನುಗಾರರನ್ನು, ಮನ್ನಾರ್‌ನ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು’ ಎಂದು ಲಂಕಾ ನೌಕಾಪಡೆಯ ಹೇಳಿಕೆಯಲ್ಲಿ ವಿವರಿಸಲಾಗಿದೆ.

ಇದೇ 22ರಂದು 10 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT