ನೈಜೀರಿಯಾ: ಮಸೀದಿಗೆ ನುಗ್ಗಿ ಗುಂಡಿನ ದಾಳಿ–16 ಜನರ ಸಾವು

ಲಾಗೋಸ್ (ಎಪಿ): ಉತ್ತರ ನೈಜೀರಿಯಾದ ಬಾರೆ ಎಂಬ ಗ್ರಾಮದ ಮಸೀದಿ ಮೇಲೆ ಗುರುವಾರ ದಾಳಿ ಮಾಡಿದ ಬಂದೂಕುಧಾರಿಗಳು ಗುಂಡಿನ ಮಳೆ ಸುರಿಸಿ 16 ಜನರನ್ನು ಕೊಂದು, ಹಲವರನ್ನು ಅಪಹರಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಮೋಟಾರ್ ಸೈಕಲ್ಗಳಲ್ಲಿ ಬಂದ ಹತ್ತಾರು ದಾಳಿಕೋರರು ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ಕೆಲ ಗಂಟೆಗಳವರೆಗೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 16 ಜನರು ಮೃತಪಟ್ಟಿದ್ದಾರೆ. ದಾಳಿಕೋರರು ಎಷ್ಟು ಜನರನ್ನು ಅಪಹರಣ ಮಾಡಿದ್ದಾರೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.