ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷರ ಮೇಲೆ ಪ್ರಭಾವ ಬೀರಿದ ಆರೋಪ: ಗುಪ್ತಾ ಸೋದರರ ಸೆರೆ

Last Updated 7 ಜೂನ್ 2022, 5:28 IST
ಅಕ್ಷರ ಗಾತ್ರ

ಜೊಹಾನ್ಸ್‌ಬರ್ಗ್‌: ಭಾರತ ಮೂಲದ ಉದ್ಯಮಿಗಳಾದ ರಾಜೇಶ್ ಗುಪ್ತಾ ಮತ್ತು ಅತುಲ್ ಗುಪ್ತಾ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಬಂಧಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾ ಸರ್ಕಾರ ಸೋಮವಾರ ಹೇಳಿದೆ.

ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರ ಸ್ನೇಹಿತರಾದ ಗುಪ್ತಾ ಸಹೋದರರು, ಅವರೊಂದಿಗಿನ ಸ್ನೇಹ ಸಂಬಂಧವನ್ನು ಬಳಸಿಕೊಂಡು ಆರ್ಥಿಕವಾಗಿ ಲಾಭ ಪಡೆದ ಮತ್ತು ಪ್ರಮುಖ ನೇಮಕಾತಿಗಳಲ್ಲಿ ಪ್ರಭಾವ ಬೀರಿದ ಆರೋಪ ಎದುರಿಸುತ್ತಿದ್ದಾರೆ. ಆದರೆ, ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಗುಪ್ತಾ ಸೋದರರು ಪ್ರತಿಪಾದಿಸಿದ್ದಾರೆ.

‘ಯುಎಇ ಮತ್ತು ದಕ್ಷಿಣ ಆಫ್ರಿಕಾದ ವಿವಿಧ ಕಾನೂನು ಜಾರಿ ಸಂಸ್ಥೆಗಳ ನಡುವೆ ಬಂಧಿತರ ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ‘ ಎಂದು ದಕ್ಷಿಣ ಆಫ್ರಿಕಾದ ನ್ಯಾಯ ಮತ್ತು ತಿದ್ದುಪಡಿ ಸೇವೆಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

2009ರಿಂದ 2018ರ ವರೆಗಿನ ಜುಮಾ ಅವರ ಒಂಬತ್ತು ವರ್ಷಗಳ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ 2018ರಲ್ಲಿ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು.

ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡಲು ಉದ್ಯಮಿಗಳಾದ ಅತುಲ್, ಅಜಯ್ ಮತ್ತು ರಾಜೇಶ್ ಗುಪ್ತಾ ಅವರಿಗೆ ಅವಕಾಶ ಮಾಡಿಕೊಟ್ಟಿರುವ ಆರೋಪಗಳೂ ಜುಮಾ ಅವರ ಮೇಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT