ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಬಿಕ್ಕಟ್ಟು: ದಕ್ಷಿಣ ಆಫ್ರಿಕಾದಲ್ಲಿ ‘ವಿಪತ್ತು ಪರಿಸ್ಥಿತಿ‘ ಘೋಷಣೆ

Last Updated 10 ಫೆಬ್ರುವರಿ 2023, 12:40 IST
ಅಕ್ಷರ ಗಾತ್ರ

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದಲ್ಲಿ ತೀವ್ರ ವಿದ್ಯುತ್‌ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ‘ವಿಪತ್ತು ಪರಿಸ್ಥಿತಿ’ ಘೋಷಣೆ ಮಾಡಿದ್ದಾರೆ.

ಸಂಸತ್‌ ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಈ ಘೋಷಣೆ ಮಾಡಿರುವ ಅವರು, ಈ ಬಿಕ್ಕಟ್ಟನ್ನು ಪರಿಣಾಮಕಾರಿಗಾಗಿ ನಿಭಾಯಿಸುವ ಉದ್ದೇಶದಿಂದ ಹೊಸ ಸಚಿವರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೋವಿಡ್‌ ಪಿಡುಗಿನ ಸಮಯದಲ್ಲಿ ಘೋಷಣೆ ಮಾಡಿದ್ದ ವಿಪತ್ತು ಪರಿಸ್ಥಿತಿಯನ್ನು ತೆಗೆದುಹಾಕಿದ 10 ತಿಂಗಳ ನಂತರ ಮತ್ತೆ ಅಂತಹದ್ದೇ ಪರಿಸ್ಥಿತಿ ಎದುರಾಗಿದೆ.

ಇನ್ನೊಂದೆಡೆ, ವಿದ್ಯುತ್‌ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದಿಂದಾಗಿ ವಿದ್ಯುತ್‌ ಸಮಸ್ಯೆ ಮತ್ತಷ್ಟು ಹೆಚ್ಚಿದೆ. ಹೀಗಾಗಿ ದಕ್ಷಿಣ ಆಫ್ರಿಕಾದಲ್ಲಿ ದಿನಕ್ಕೆ 12 ಗಂಟೆಗಳಷ್ಟು ವಿದ್ಯುತ್‌ ನಿಲುಗಡೆ ಸಾಮಾನ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT