ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧ ಪತ್ತೆ, ಸೋಂಕು ಹೆಚ್ಚಳ

Last Updated 19 ಡಿಸೆಂಬರ್ 2020, 7:56 IST
ಅಕ್ಷರ ಗಾತ್ರ

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧ ಪತ್ತೆಯಾಗಿದ್ದು, ಸೋಂಕು ಹರಡುವಿಕೆಯ ಎರಡನೇ ಅಲೆಗೆ ಕಾರಣವಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವರು ತಿಳಿಸಿದ್ದಾರೆ. ಬ್ರಿಟನ್‌ನಲ್ಲಿಯೂ ವೈರಸ್‌ನ ಹೊಸ ಪ್ರಬೇಧ ಪತ್ತೆಯಾಗಿರುವುದಾಗಿ ಕೆಲವು ದಿನಗಳ ಹಿಂದೆ ಅಲ್ಲಿನ ಸರ್ಕಾರ ತಿಳಿಸಿತ್ತು.

‘ಸಾರ್ಸ್‌ ಕೊರೊನಾ ವೈರಸ್‌–2’ ಇದರ ಹೊಸ ಪ್ರಬೇಧವನ್ನು ದಕ್ಷಿಣ ಆಫ್ರಿಕಾ ವಿಜ್ಞಾನಿಗಳು ಪತ್ತೆ ಮಾಡಿದ್ದು, ಅದನ್ನು ‘501.ವಿ2’ ಎಂದು ಕರೆಯಲಾಗಿದೆ. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಜವೆಲಿ ಎಂಖೈಜ್‌ ಟ್ವೀಟ್ ಮಾಡಿದ್ದಾರೆ.

ಈಗ ಉಂಟಾಗಿರುವ ಸೋಂಕಿನ ಎರಡನೇ ಅಲೆಗೆ ವೈರಸ್‌ನ ಹೊಸ ಪ್ರಬೇಧವೇ ಕಾರಣ ಎಂಬುದು ನಾವು ಸಂಗ್ರಹಿಸಿದ ಸಾಕ್ಷಿಗಳಿಂದ ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.

ಆಫ್ರಿಕಾ ಖಂಡದಲ್ಲಿ ದಕ್ಷಿಣ ಆಫ್ರಿಕಾವು ಅತಿಹೆಚ್ಚು ಸೋಂಕಿತರನ್ನು ಒಳಗೊಂಡಿದೆ. ಅಲ್ಲಿ 9 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದು, 20 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದೀಗ ಮತ್ತೆ ಸೋಂಕು ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿರುವುದರಿಂದ ಸರ್ಕಾರವು ನಿರ್ಬಂಧಗಳನ್ನು ಹೆಚ್ಚಿಸಿದೆ.

ಹೊಸ ಪ್ರಬೇಧ ಪತ್ತೆ ಮಾಡಿದ ವಿಜ್ಞಾನಿಗಳ ಜತೆ ಸಂಪರ್ಕದಲ್ಲಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ. ವೈರಸ್‌ನ ಹೊಸ ಪ್ರಬೇಧವು ಪರಿಣಾಮ ಬೀರುವ ವಿಧಾನದಲ್ಲಿ ಬದಲಾವಣೆ ಕಂಡುಬಂದಿಲ್ಲ ಎಂದೂ ಡಬ್ಲ್ಯುಎಚ್‌ಒ ಹೇಳಿದೆ.

ಇಂಗ್ಲೆಂಡ್‌ನಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧವೊಂದು ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ 1000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಕಂಡು ಬಂದಿವೆ ಎಂದು ಬ್ರಿಟನ್ ಆರೋಗ್ಯ ಸಚಿವ ಮ್ಯಾಟ್‌ ಹ್ಯಾನ್‌ಕಾಕ್‌ ಸೋಮವಾರ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT