ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ: ಅಸ್ಟ್ರಾಜೆನೆಕಾ ಲಸಿಕೆ ಅಭಿಯಾನ ಸ್ಥಗಿತ

Last Updated 8 ಫೆಬ್ರುವರಿ 2021, 8:11 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾವು ತನ್ನ ಆರೋಗ್ಯ ಕಾರ್ಯಕರ್ತರಿಗೆ ಅಸ್ಟ್ರಾಜೆನೆಕಾ ಲಸಿಕೆ ನೀಡುವ ಅಭಿಯಾನವನ್ನು ಸ್ಥಗಿತಗೊಳಿಸಿದೆ.

ದಕ್ಷಿಣ ಆಫ್ರಿಕಾವು ನಡೆಸಿದ ಕ್ಲಿನಿಕಲ್‌ ಪ್ರಯೋಗದಲ್ಲಿ ಅಸ್ಟ್ರಾಜೆನೆಕಾ ಲಸಿಕೆಯು ಲಘು ಮತ್ತು ಪ್ರಬಲ ರೋಗಗಳ ವಿರುದ್ಧ ಪರಿಣಾಮಕಾರಿಯಾಗಿಲ್ಲ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.

ದಕ್ಷಿಣ ಆಫ್ರಿಕಾ ಕಳೆದ ವಾರ ಹತ್ತು ಲಕ್ಷ ಡೋಸ್‌ ಆಸ್ಟ್ರಾಜೆನೆಕಾ ಲಸಿಕೆಗಳನ್ನು ಪಡೆದುಕೊಂಡಿದ್ದು, ಫೆಬ್ರುವರಿ ತಿಂಗಳ ಮಧ್ಯದಿಂದ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲು ಉದ್ದೇಶಿಸಿತ್ತು.

‘ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‌ನ ಪ್ರಕರಣಗಳು ಹೆಚ್ಚಾಗಿದ್ದು, ಅಸ್ಟ್ರಾಜೆನೆಕಾ ಲಸಿಕೆಯು ಇದರಿಂದ ಸ್ವಲ್ಪ ಮಟ್ಟದ ಸುರಕ್ಷತೆಯನ್ನು ಮಾತ್ರ ನೀಡುತ್ತದೆ’ ಎಂದು ದಕ್ಷಿಣ ಆಫ್ರಿಕಾ ನಡೆಸಿದ ಪ್ರಾಥಮಿಕ ಅಧ್ಯಯನದಲ್ಲಿ ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಇಲ್ಲಿ ವರದಿಯಾಗಿರುವ ಕೋವಿಡ್‌ ಪ್ರಕರಣಗಳ ಪೈಕಿ ಶೇಕಡ 90 ರಷ್ಟು ರೂಪಾಂತರಗೊಂಡ ಕೊರೊನಾ ಸೋಂಕು ಹೆಚ್ಚಾಗಿವೆ’ ಎಂದು ಅಲ್ಲಿನ ಆರೋಗ್ಯ ಸಚಿವ ಜ್ವೆಲಿ ಮ್ಖೈಜ್ ಅವರು ತಿಳಿಸಿದರು.

‘ಅಸ್ಟ್ರಾಜೆನೆಕಾ ಲಸಿಕೆಯು ಕೇವಲ ಮೂಲ ಕೊರೊನಾ ವೈರಸ್‌ನ ವಿರುದ್ಧ ಪರಿಣಾಮಕಾರಿಯಾಗಿದೆ. ಇದು ರೂಪಾಂತರಗೊಂಡ ಕೊರೊನಾದ ಮೇಲೆ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಹಾಗಾಗಿ ಸದ್ಯಕ್ಕೆ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಮ್ಖೈಜ್ ಹೇಳಿದರು.

‘ಈ ಕ್ಲಿನಿಕಲ್‌ ಟ್ರಯಲ್‌ಗೆ 2,000 ಮಂದಿಯನ್ನು ಒಳಪಡಿಸಲಾಗಿತ್ತು. ಇದರಲ್ಲಿ ಭಾಗಿಯಾದವರಲ್ಲಿ ಹೆಚ್ಚಿನವರು ಯುವಕರು ಮತ್ತು ಆರೋಗ್ಯವಂತರಾಗಿದ್ದರು. ಇದರಲ್ಲಿ ಭಾಗಿಯಾಗಿದ್ದ ಸ್ವಯಂಸೇವಕರ ಸರಾಸರಿ ವಯಸ್ಸು 31 ಆಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ವಿಜ್ಞಾನಿಗಳು ಈ ಬಗ್ಗೆ ಅಧ್ಯಯನವನ್ನು ನಡೆಸುತ್ತಿದ್ದಾರೆ. ಈ ಬಳಿಕ ಸರ್ಕಾರ ಲಸಿಕೆ ಕುರಿತಾಗಿ ನಿರ್ಧಾರ ಕೈಗೊಳ್ಳುತ್ತದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT