ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕೊರಿಯಾ: ಒಂದೇ ದಿನ 4 ಸಾವಿರ ಕೋವಿಡ್ ಪ್ರಕರಣಗಳು ವರದಿ

Last Updated 24 ನವೆಂಬರ್ 2021, 9:25 IST
ಅಕ್ಷರ ಗಾತ್ರ

ಸಿಯೋಲ್‌, ದಕ್ಷಿಣ ಕೊರಿಯಾ (ಎಪಿ): ಕೋವಿಡ್‌–19 ಪಿಡುಗು ಕಾಣಿಸಿಕೊಂಡ ನಂತರ ದಕ್ಷಿಣ ಕೊರಿಯಾದಲ್ಲಿ ಮೊದಲ ಬಾರಿಗೆ ಬುಧವಾರ ಒಂದೇ ದಿನ 4,116 ಪ್ರಕರಣಗಳು ವರದಿಯಾಗಿವೆ.

ಬುಧವಾರ ವರದಿಯಾದ ಪ್ರಕರಣಗಳ ಪೈಕಿ ಹೆಚ್ಚಿನವು ರಾಜಧಾನಿ ಸೋಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡು ಬಂದಿವೆ. ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದರಿಂದ, ತೀವ್ರ ನಿಗಾ ಘಟಕಗಳ ಕೊರತೆ ಕಂಡುಬರುವ ಆತಂಕ ಎದುರಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರ್ಥಿಕತೆಗೆ ಚುರುಕು ನೀಡುವ ಸಲುವಾಗಿ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲಾ ನಿರ್ಬಂಧಗಳನ್ನು ಇತ್ತೀಚೆಗೆ ಸಡಿಲಿಸಲಾಗಿದೆ. ಶಾಲೆಗಳು ಸಹ ಆರಂಭವಾಗಿವೆ. ಇದರ ಬೆನ್ನಲ್ಲೇ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ತಳಿ ಸೋಂಕು ಪ್ರಸರಣ ಹೆಚ್ಚುತ್ತಿರುವುದು ಕಂಡುಬರುತ್ತಿದೆ ಎಂದು ಕೊರಿಯಾ ರೋಗ ನಿಯಂತ್ರಣ ಸಂಸ್ಥೆ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 35 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 3,363ಕ್ಕೇರಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT