ಶುಕ್ರವಾರ, ಜುಲೈ 30, 2021
20 °C

ಸ್ಪೇನ್‌ನಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಏರಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಮ್ಯಾಡ್ರಿಡ್‌: ಸ್ಪೇನ್‌ನಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ತಳಿಯು ವೇಗವಾಗಿ ಹರಡುತ್ತಿದೆ. ಬಾರ್ಸಿಲೋನಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗಿದ್ದು, ಆಸ್ಪತ್ರೆಗಳು ಸೋಂಕನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.

ಈ ತಳಿಯು ಲಸಿಕೆ ಪಡೆಯದ ಕಿರಿಯ ವಯಸ್ಕರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಹಲವು ಮಂದಿ ಆರೋಗ್ಯ ಕೇಂದ್ರಗಳು ಮತ್ತು ತುರ್ತು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾರ್ಸಿಲೋನಾದ ಡೆಲ್‌ಮಾರ್‌ ಆಸ್ಪ‍ತ್ರೆಯಲ್ಲಿ ಎರಡು ವಾರಗಳೊಳಗೆ ಕೋವಿಡ್‌ ರೋಗಿಗಳ ಸಂಖ್ಯೆ 8ರಿಂದ 35ಕ್ಕೆ ಏರಿಕೆಯಾಗಿದೆ.

‘ಒಂದು ವೇಳೆ ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಸೋಂಕು ಪ್ರಸರಣವನ್ನು ತಡೆಯಲು ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕಾಗುತ್ತದೆ’ ಎಂದು ಬಾರ್ಸಿಲೋನಾದ ಕೋವಿಡ್‌ ಸಂಯೋಜಕ ಜುವಾನ್ ಪ್ಯಾಬ್ಲೊ ಹೊರ್ಕಜಾಡಾ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು