ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಸರ್ವಪಕ್ಷ ಸರ್ಕಾರಕ್ಕೆ ಸಮ್ಮತಿ

Last Updated 10 ಜುಲೈ 2022, 19:26 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದಲ್ಲಿ ಸರ್ವಪಕ್ಷ ಮಧ್ಯಂತರ ಸರ್ಕಾರ ರಚಿಸಲು ಅಲ್ಲಿನ ಪ್ರಮುಖ ವಿರೋಧ ಪಕ್ಷಗಳು ಭಾನುವಾರ ನಿರ್ಧರಿಸಿವೆ.
ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಬಗ್ಗೆ ಜನರಲ್ಲಿ ಭಾರಿ ಆಕ್ರೋಶ
ಸೃಷ್ಟಿಯಾಗಿದೆ. ಹಾಗಾಗಿ, ಗೊಟಬಯ ಅವರು ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈಗ ದೇಶದ ಮುಂದೆ ಇರುವ ಆರ್ಥಿಕ ಬಿಕ್ಕಟ್ಟು ಮತ್ತು ಗೊಟಬಯ ರಾಜೀನಾಮೆಯಿಂದ ಸೃಷ್ಟಿಯಾಗುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು ಎಂಬ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಮುಖಂಡರು ಸಭೆ ನಡೆಸಿದ್ದರು.

‘ಎಲ್ಲ ಪಕ್ಷಗಳಿಗೂ ಪ್ರಾತಿನಿಧ್ಯ ಇರುವ ಮಧ್ಯಂತರ ಸರ್ಕಾರ ರಚಿಸಲು ತಾತ್ವಿಕವಾಗಿ ನಾವು ಸಮ್ಮತಿಸಿದ್ದೇವೆ’ ಎಂದು ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನ ಪಕ್ಷದಿಂದ ಸಿಡಿದು ಬೇರೆಯಾಗಿರುವ ಬಣದ ನಾಯಕ ವಿಮಲ್‌ ವೀರವಂಶ ಹೇಳಿದ್ದಾರೆ.

ರಾಜಪಕ್ಸ ಅವರ ರಾಜೀನಾಮೆಯ ವರೆಗೆ ಕಾಯುವ ಅಗತ್ಯವೇನೂ ಇಲ್ಲ ಎಂದು ಇದೇ ಬಣದ ಇನ್ನೊಬ್ಬ ನಾಯಕ ವಾಸುದೇವ ನನಯಕ್ಕರ ಹೇಳಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಸಂಸತ್ತಿನ ಸ್ಪೀಕರ್‌ ಮಹಿಂದಾ ಯಪ ಅಭಯ
ವರ್ಧನ ಅವರಿಗೆ ಗೊಟಬಯ ಅವರು ಶನಿವಾರ ತಿಳಿಸಿದ್ದಾರೆ. ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಅವರೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಬಯಸಿವೆ ಎಂದು ಸ್ಪೀಕರ್ ಅವರು ಗೊಟಬಯ ಅವರಿಗೆ ಶನಿವಾರ ತಿಳಿಸಿದ್ದರು.

ರಾಜಕೀಯ ಪಕ್ಷಗಳ ಮುಖಂಡರು ಸೋಮವಾರ ಸಭೆ ಸೇರಿ, ಸಂಸತ್‌ ಅಧಿವೇಶನ ನಡೆಸುವುದು ಮತ್ತು ರಾಜಪಕ್ಸ ಅವರಿಂದ ಅಧಿಕಾರ ಹಸ್ತಾಂತರ ಪ್ರಕ್ರಿಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT