ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2030ರ ವೇಳೆ ಸೇನಾ ಸಾಮರ್ಥ್ಯ ಅರ್ಧಕ್ಕೆ ಇಳಿಕೆ: ಶ್ರೀಲಂಕಾ

Last Updated 13 ಜನವರಿ 2023, 12:24 IST
ಅಕ್ಷರ ಗಾತ್ರ

ಕೊಲಂಬೊ: ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಶ್ರೀಲಂಕಾ 2030ರ ವೇಳೆಗೆ ತನ್ನ ಸೇನಾ ಸಾಮರ್ಥ್ಯವನ್ನು ಈಗ ಇರುವುದಕ್ಕಿಂತ ಅರ್ಧಕ್ಕೆ ಇಳಿಸುವುದಾಗಿ ಶುಕ್ರವಾರ ಘೋಷಿಸಿದೆ.

2023ರ ಬಜೆಟ್‌ನಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕಿಂತ ಹೆಚ್ಚಿನ ಅನುದಾನವನ್ನು ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟಿದ್ದಕ್ಕೆ ಬಾರಿ ಟೀಕೆ ವ್ಯಕ್ತವಾದ ಬೆನ್ನಲ್ಲೇ ಶ್ರೀಲಂಕಾ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸದ್ಯ ಶ್ರೀಲಂಕಾದ ಸೇನಾ ಸಾಮರ್ಥ್ಯ 2,00,783. ಇದನ್ನು ಮುಂದಿನ ವರ್ಷದ ವೇಳೆಗೆ 1.35 ಲಕ್ಷಕ್ಕೆ ಮತ್ತು 2030ರ ವೇಳೆ 1 ಲಕ್ಷಕ್ಕೆ ತಗ್ಗಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀಲಂಕಾ 2023ರ ಬಜೆಟ್‌ನಲ್ಲಿ ರಕ್ಷಣಾ ಇಲಾಖೆಗೆ 539 ಬಿಲಿಯನ್‌ ರೂಪಾಯಿ ಮೀಸಲಿಟ್ಟಿದ್ದರೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ 300 ಬಿಲಿಯನ್‌ ರೂಪಾಯಿ ಅನುದಾನ ಒದಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT