ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆ ಹತ್ತಿಕ್ಕಲು ಶ್ರೀಲಂಕಾದಲ್ಲಿ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ

Last Updated 3 ಏಪ್ರಿಲ್ 2022, 4:43 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಧಿಕಾರಿಗಳು ವಾರಾಂತ್ಯದಲ್ಲಿ ದೇಶದಾದ್ಯಂತ ಕರ್ಫ್ಯೂ ವಿಧಿಸಿದ ನಂತರ, ಭಾನುವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ವಿಧಿಸಿರುವುದಾಗಿ ವರದಿಯಾಗಿದೆ.

ಶ್ರೀಲಂಕಾ ದೇಶದಾದ್ಯಂತ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲಾ ವೇದಿಕೆಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ' ಎಂದು ಲಂಡನ್ ಮೂಲದ ನೆಟ್‌ಬ್ಲಾಕ್ಸ್ ತಿಳಿಸಿದೆ.

ಈ ಐದು ವೇದಿಕೆಗಳಲ್ಲಿ ಯಾವುದೂ ಕೂಡ ಸ್ಥಳೀಯ ಅಂತರ್ಜಾಲ ಸೇವಾ ಪೂರೈಕೆದಾರರಿಂದ ಸಂಪರ್ಕ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಎಎಫ್‌ಪಿ ದೃಢಪಡಿಸಿದೆ.

ಆಹಾರ, ಇಂಧನ ಮತ್ತು ಔಷಧಗಳ ಕೊರತೆಯಿಂದ ಬೇಸತ್ತಿರುವ ಜನರು ಸರ್ಕಾರದ ವಿರುದ್ಧ ಯೋಜಿತ ಪ್ರತಿಭಟನೆಗಳನ್ನು ನಡೆಸಲು ಮುಂದಾಗಿದ್ದಾರೆ. ಅದನ್ನು ತಡೆಯಲು ಶ್ರೀಲಂಕಾದ ಪೊಲೀಸರು ಶನಿವಾರ 36 ಗಂಟೆಗಳ ಕರ್ಫ್ಯೂ ಘೋಷಿಸಿದ್ದರು.

ಶನಿವಾರ ಸಂಜೆಯಿಂದ ಕರ್ಫ್ಯೂ ಜಾರಿಗೆ ಬಂದಿದ್ದು, ಸೋಮವಾರ ಬೆಳಿಗ್ಗೆ ಹಿಂತೆಗೆದುಕೊಳ್ಳಲಾಗುವುದು ಎಂದು ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದ ಒಂದು ದಿನದ ನಂತರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT