ಶನಿವಾರ, ಮೇ 28, 2022
21 °C

ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾ ತೊರೆಯುವಂತಿಲ್ಲ: ನ್ಯಾಯಾಲಯದ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ: ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಇತ್ತೀಚೆಗಷ್ಟೇ ಸರ್ಕಾರಿ ವಿರೋಧಿ ಪ್ರತಿಭಟನಕಾರರ ಮೇಲೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ, ಅವರ ಪುತ್ರ ನಮಲ್ ರಾಜಪಕ್ಸ ಹಾಗೂ ಇತರ 15 ಮಂದಿ ದೇಶಬಿಟ್ಟು ಹೋಗದಂತೆ ಸ್ಥಳೀಯ ನ್ಯಾಯಾಲಯವೊಂದು ನಿರ್ಬಂಧ ಹೇರಿದೆ.

‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಗೆ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಸಂಚು ರೂಪಿಸಿ, ಈ ದಾಳಿಗಳನ್ನು ಯೋಜಿಸಿದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಹೊರದೇಶಗಳಿಗೆ ಪ್ರಯಾಣಿಸದಂತೆ ನಿರ್ಬಂಧ ಹೇರಬೇಕು’ ಎಂದು ಅಟಾರ್ನಿ ಜನರಲ್ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಈ ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಇವನ್ನೂ ಓದಿ


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು