ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್| ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ ಹೆಚ್ಚಳ: ಸೆ. 6ರವರೆಗೆ ಲಾಕ್‌ಡೌನ್

Last Updated 27 ಆಗಸ್ಟ್ 2021, 12:14 IST
ಅಕ್ಷರ ಗಾತ್ರ

ಕೊಲಂಬೊ: ಕೋವಿಡ್‌ನಿಂದಾಗುವ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶ್ರೀಲಂಕಾ ಸರ್ಕಾರವು ಸೆ. 6ರ ತನಕ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸಿದೆ.

ಶುಕ್ರವಾರ ನಡೆದ ಉನ್ನತಮಟ್ಟದ ಸಭೆಯ ನಂತರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.

ದಿನೇದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಮೂರನೇ ಅಲೆಯ ವಿರುದ್ಧ ಹೋರಾಡಲು ವೈದ್ಯರ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ವಿರೋಧ ಪಕ್ಷಗಳು ಸರ್ಕಾರಕ್ಕೆ ಒತ್ತಾಯಿಸಿವೆ.

ಶ್ರೀಲಂಕಾದ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರು ಆ. 20ರಂದು 10 ದಿನಗಳ ಲಾಕ್‌ಡೌನ್ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT