ಸೋಮವಾರ, ಜುಲೈ 4, 2022
24 °C

ಶ್ರೀಲಂಕಾ: ದಿನಕ್ಕೆ 10 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಶ್ರೀಲಂಕಾ ಸರ್ಕಾರ ದೇಶದಾದ್ಯಂತ ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವ ಕ್ರಮವನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡಿದೆ. ಇದರಿಂದಾಗಿ ಜನ ಸಾಮಾನ್ಯರು ರಾತ್ರಿ ವೇಳೆ ಮತ್ತಷ್ಟು ಕಾಲ ಕತ್ತಲಲ್ಲೇ ಕಾಲ ಕಳೆಯುವ ಅನಿವಾರ್ಯತೆ ಎದುರಾಗಿದೆ. 

ಜಲಜನಕ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಅಲಭ್ಯತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಳೆದೊಂದು ತಿಂಗಳಿನಿಂದ ಲಂಕಾದಲ್ಲಿ ದಿನಕ್ಕೆ 7 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. 

ತೀವ್ರ ವಿದೇಶಿ ವಿನಿಮಯ ಕೊರತೆಯ ಪರಿಣಾಮ ಶ್ರೀಲಂಕಾ ಸರ್ಕಾರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇಂಧನದ ಕೊರತೆಯಿಂದ ಜನರು ಪೆಟ್ರೋಲ್ ಪಂಪ್ ಮತ್ತು ಸೀಮೆಎಣ್ಣೆ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ಕೂತಿದ್ದಾರೆ. ಪೆಟ್ರೋಲ್ ಪಂಪ್‌ಗಳು ಮತ್ತು ಸೀಮೆಎಣ್ಣೆ ಕೇಂದ್ರಗಳಿಗೆ ಲಂಕಾ ಸರ್ಕಾರ ಸೇನಾ ಭದ್ರತೆಯನ್ನು ಒದಗಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು